ಆಷಾಢಕ್ಕೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ : ಸಿಎಂ

cm

ಮೈಸೂರು,ಜು.16-ಆಷಾಢ ಮಾಸಕ್ಕೂ ಸಚಿವ ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದರು. ಇಲ್ಲಿನ ರಾಮಕೃಷ್ಣನಗರದ ಅವರ ನಿವಾಸದಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದರು.

ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸಿದ ಬಳಿಕವಷ್ಟೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಆದರೆ ನಾನೀನ್ನು ಈ ಕುರಿತಂತೆ ಹೈಕಮಾಂಡ್ ಭೇಟಿ ಮಾಡಿಲ್ಲ. ಆದ್ದರಿಂದ ಸಂಪುಟ ವಿಸ್ತರಣೆ ಕಾರ್ಯ ಹಾಗೇ ಉಳಿದಿದೆ. ಅಷ್ಟೇ ಹೊರತು ಆಷಾಢ ಮಾಸ ಅಡ್ಡಬಂತು ಎಂದು ಸಂಪುಟ ವಿಸ್ತರಣೆಯನ್ನು ಪೆಂಡಿಂಗ್ ಇಟ್ಟಿಲ್ಲ ಎಂದು ಅವರು ಹೇಳಿದರು. ಸದ್ಯದಲ್ಲೇ ನಾನು ದೆಹಲಿಗೆ ತೆರಳಲಿದ್ದು , ಪಕ್ಷದ ವರಿಷ್ಠರ ಜೊತೆ ಸಮಾಲೋಚನೆ ನಡೆಸಿ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin