ಯಾವುದೇ ಅಧಿಕಾರಿಗಳ ಅಶಿಸ್ತಿನ ವರ್ತನೆ ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

Siddaramiaha--01

ಮೈಸೂರು,ಜು.16-ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಷಯದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.   ಇಂದು ಇಲ್ಲಿನ ಅವರ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿನ ವಿವಾದಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕಾರಿಗಳ ಅಶಿಸ್ತಿನ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ತಮಿಳುನಾಡಿನ ವಿ.ಕೆ.ಶಶಿಕಲಾ ಅವರಿಗೆ ವಿಶೇಷ ಆತಿಥ್ಯ ನೀಡಲು ಹಿರಿಯ ಅಧಿಕಾರಿಯೊಬ್ಬರಿಗೆ ಭಾರೀ ಪ್ರಮಾಣದ ಲಂಚ ನೀಡಲಾಗಿದೆ ಎಂಬ ವರದಿಗಳ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜೈಲಿನ ಖೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮತ್ತಿತರ ಅನುಕೂಲಗಳನ್ನು ಒದಗಿಸಲಾಗುತ್ತಿದೆ ಎಂಬ ಡಿಐಜಿ ಡಿ.ರೂಪಾ ಅವರ ವರದಿಗೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಯಾವ ಅಧಿಕಾರಿಗಳು ಅಶಿಸ್ತಿನಿಂದ ನಡೆದುಕೊಂಡರೆ ಅಂಥವರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದರೆ ಅಂಥವರಿಗೆ ಕಾನೂನು ರೀತ್ಯ ಶಿಕ್ಷೆಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.   ಪರಪ್ಪನ ಅಗ್ರಹಾರ ಜೈಲಿನಲ್ಲಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ನಡೆದುಕೊಳ್ಳುತ್ತಿರುವ ರೀತಿಗೆ ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin