ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಹಿನ್ನಲೆಯಲ್ಲಿ ಸರ್ವಪಕ್ಷ ಸಭೆ

Session-Parliamne-t

ನವದೆಹಲಿ, ಜು.16- ನಾಳೆಯಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಈ ಹಿನ್ನಲೆಯಲ್ಲಿ ಇಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. ನಾಳೆ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಅಧಿವೇಶನಕ್ಕೂ ಮುನ್ನ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಕೋರಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ಜು.17ರಿಂದ ಆರಂಭವಾಗುತ್ತಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಜಿಎಸ್‍ಟಿ ಮಸೂದೆ, ನೋಟು ನಿಷೇಧ ವಿಚಾರ ಸೇರಿದಂತೆ ದೇಶದಲ್ಲಿ ಎದುರಾಗಿರುವ ಇನ್ನಿತರೆ ಸಮಸ್ಯೆಗಳ ಕುರಿತಂತೆ ಸರ್ಕಾರದ ವಿರುದ್ಧ ಟೀಕಾಸ್ತ್ರ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿದ್ದ ವಿನೋದ್ ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿ ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೊದಲ ದಿನದ ಕಲಾಪವನ್ನು ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin