8ನೇ ಬಾರಿಗೆ ಪ್ರತಿಷ್ಠಿತ ವಿಂಬಲ್ಡನ್ ಪ್ರಶಸ್ತಿ ಗೆದ್ದ ಫೆಡರರ್

wimbledon

ಲಂಡನ್. ಜು.16 : ಆಲ್ ಇಂಗ್ಲೆಂಡ್ ಕ್ಲಬ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸ್ವಿಜರ್ಲೆಂಡ್ ನ ಟೆನಿಸ್ ಆಟಗಾರ ರೋಜರ್ ಫೆಡರರ್ 8ನೇ ಬಾರಿಗೆ ಪ್ರತಿಷ್ಠಿತ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಹಾಗೂ ವೃತ್ತಿ ಜೀವನದ 19 ನೇ ಗ್ರಾಂಡ್ ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಗೂ ಅವರು ಪಾತ್ರರಾಗಿದ್ದಾರೆ. 1975 ರಲ್ಲಿ ಅಮೆರಿಕದ ಆರ್ಥರ್ ಆಶ್ ತಮ್ಮ 32 ನೇ ವಯಸ್ಸಿನಲ್ಲಿ ಇಂತಹ ಸಾಧನೆ ಮಾಡಿದ್ದರು.

ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ರೋಜರ್ ಫೆಡರರ್ ಕ್ರೊವೇಶಿಯಾದ ಮರಿನ್ ಸಿಲಿಕ್ ರನ್ನು 6-3, 6-1, 6-4, ನೇರ ಸೆಟ್ ಗಳ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin