ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ವೆಂಕಯ್ಯನಾಯ್ಡು ರಾಜೀನಾಮೆ

Venkayya-Naidu--01

ನವದೆಹಲಿ. ಜು. 17 : ರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಇದರ ಬೆನ್ನಲ್ಲೇ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸೋಮವಾರ ಬಿಜೆಪಿ ನಿರ್ಧರಿಸಿದೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ವೆಂಕಯ್ಯ ನಾಯ್ಡು ಅವರನ್ನು ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

ರಾಜೀನಾಮೆ : ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲೇ ಕೇಂದ್ರ ನಗರಾಭಿವೃದ್ಧಿ ನಾಯ್ಡು ರಾಜೀನಾಮೆ ನೀಡಿದ್ದಾರೆ. ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಆಗಸ್ಟ್ 5ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟಗೊಳ್ಳಲಿದೆ. ಸದ್ಯ ಉಪ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಮೀದ್ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.  ಸುಮಾರು 25 ವರ್ಷಗಳ ರಾಜಕೀಯ ಅನುಭವ ಹೊಂದಿರುವ ವೆಂಕಯ್ಯ ನಾಯ್ಡು ಅವರು ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.  ಇತ್ತ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಉಪ ರಾಷ್ಟ್ರಪತಿ ಹುದ್ದೆಗೆ ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin