ಕುಲಾಂತರಿ ಸಾಸಿವೆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ : ಸುಪ್ರೀಂಗೆ ಕೇಂದ್ರ ಮನವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

supreme-ocurt

ನವದೆಹಲಿ, ಜು.17- ಕುಲಾಂತರಿ (ವಂಶವಾಹಿ ಪರಿವರ್ತಿತ-ಜಿಎಂ) ಸಾಸಿವೆ ಬೆಳೆಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಿಡುಗಡೆ ಮಾಡುವ ಕುರಿತು ತಾನು ಈವರೆಗೆ ಯಾವುದೇ ನೀತಿ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಪಷ್ಟಪಡಿಸಿದೆ..  ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಇಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠಕ್ಕೆ ಈ ವಿಷಯ ವನ್ನು ಮನವರಿಕೆ ಮಾಡಿಕೊಟ್ಟರು.

ಕುಲಾಂತರಿ ಸಾಸಿವೆ ಬೆಳೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರವು ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದೆ. ಈ ಜಿಎಂ ಬೆಳೆಯನ್ನು ವಾಣಿಜ್ಯವಾಗಿ ಪರಿಚಯಿಸುವ ಸಾಧಕ-ಬಾಧಕದ ಬಗ್ಗೆ ವಿವಿಧ ವಲಯಗಳಿಂದ ಸಲಹೆಗಳು ಮತ್ತು ಆಕ್ಷೇಪಗಳನ್ನು ಸ್ವೀಕರಿಸಲಾಗಿದೆ. ಇವುಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಈ ಬಗ್ಗೆ ಸರ್ಕಾರವು ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin