ರಾಮನಾಥ್ ಕೋವಿಂದ್ ಅವರ ಗೆಲುವು ನಿಶ್ಚಿತ : ಜಗದೀಶ್ ಶೆಟ್ಟರ್

Jagadish-Shettar

ಬೆಂಗಳೂರು,ಜು.17-ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ರಾಮನಾಥ್ ಕೋವಿಂದ್ ಅವರ ಗೆಲುವು ನಿಶ್ಚಿತ. ಎಂಟು ಪಕ್ಷೇತರರು ಎನ್‍ಡಿಎ ಅಭ್ಯರ್ಥಿ ಪರವಾಗಿ ಮತ ಚಲಾವಣೆ ಮಾಡಿದ್ದು , 56ಕ್ಕೂ ಹೆಚ್ಚು ಶಾಸಕರು ಕೋವಿಂದ್ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಹೇಳಿದರು. ರಾಷ್ಟ್ರಪತಿ ಚುನಾವಣೆ ಸಂಬಂಧ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ರಾಮನಾಥ್ ಕೋವಿಂದ್ ಅವರ ಗೆಲುವು ಖಚಿತವಾಗಿದೆ. [ ರಾಷ್ಟ್ರಪತಿ ಚುನಾವಣೆ (Live Updates) ]

ಅವರು ಸರಳ ಹಾಗೂ ಸಜ್ಜನ ವ್ಯಕ್ತಿ. ಅಂಥವರು ನಮ್ಮ ರಾಷ್ಟ್ರಕ್ಕೆ ರಾಷ್ಟ್ರಪತಿಯಾಗುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಖಂಡನೆ: ರಾಜ್ಯ ಬಿಜೆಪಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಅವರ ವಿಚಾರಣೆ ನೆಪದಲ್ಲಿ ಅರ್ಧ ರಾತ್ರಿಯಲ್ಲಿ ಬಿಎಸ್‍ವೈ ನಿವಾಸಕ್ಕೆ ಪೊಲೀಸರು ತೆರಳಿದ್ದು ಖಂಡನೀಯ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸರ್ಕಾರ ಇಂತಹ ಕ್ರಮವನ್ನು ಕೈಗೊಂಡಿದೆ ಎಂದು ಆರೋಪಿಸಿದರು.

ಯಡಿಯೂರಪ್ಪನವರು ರಾಜ್ಯ ಬಿಜೆಪಿ ಅಧ್ಯಕ್ಷರು, ಸಂಸದರೂ, ಮಾಜಿ ಮುಖ್ಯಮಂತ್ರಿಗಳಾಗಿದ್ದಾರೆ. ರಾಜಕೀಯವಾಗಿ ಪ್ರಭಾವ ಹೊಂದಿರುವ ಅವರ ಮೇಲೆ ದ್ವೇಷ ಸಾಧಿಸುವ ಹಿನ್ನೆಲೆಯಲ್ಲಿ ಈ ರೀತಿ ಕ್ರಮಕ್ಕೆ ಮುಂದಾಗಿರುವುದನ್ನು ನಾವು ಸಹಿಸುವುದಿಲ್ಲ ಎಂದರು. ಹಲವು ರಾಜಕೀಯ ವೈಷಮ್ಯಕ್ಕಾಗಿ ಪೊಲೀಸರ ಮೂಲಕ ನಮ್ಮ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಯಡಿಯೂರಪ್ಪ ಹೇಳಿರುವ ಮಾತು ನಿಜ. ಅದನ್ನು ನಾನು ಬೆಂಬಲಿಸುತ್ತೇನೆ. ಇಂತಹ ರಾಜಕೀಯ ದ್ವೇಷದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಶೆಟ್ಟರ್ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin