ಪಾರ್ಕ್ ನಲ್ಲಿ ಜಾರುಬಂಡಿಗೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Parka--01

ಬೆಂಗಳೂರು, ಜು.17- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ವ್ಯಕ್ತಿಯೊಬ್ಬ ಉದ್ಯಾನವನದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿಲೇಔಟ್ ನಿವಾಸಿ ಮರಿಸ್ವಾಮಿ(54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಡುಗೆಹಳ್ಳಿಯಲ್ಲಿನ ಕೆನರಾಬ್ಯಾಂಕ್ ಹೌಸಿಂಗ್ ಸೊಸೈಟಿಯೊಂದರಲ್ಲಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಇವರನ್ನು ಕಳೆದರೆಡು ವರ್ಷಗಳ ಹಿಂದೆ ಕೆಲಸದಿಂದ ತೆಗೆಯಲಾಗಿತ್ತು.
ತದನಂತರ ಕಾರು ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ.
ಮರಿಸ್ವಾಮಿ ಯಾರೊಂದಿಗೂ ಅಷ್ಟಾಗಿ ಬೆರೆಯುತ್ತಿರಲಿಲ್ಲ. ರಾತ್ರಿ ಮನೆಯೊಂದರ ಸಮೀಪದ ಉದ್ಯಾನವನಕ್ಕೆ ತೆರಳಿ ಜಾರಬಂಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದ ಕೊಡುಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin