ಯುಪಿಎ ದಲಿತ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದು ದುರದೃಷ್ಟಕರ

C-TRavi

ಬೆಂಗಳೂರು,ಜು.17-ರಾಷ್ಟ್ರಪತಿ ಚುನಾವಣೆಗೆ ದಲಿತ ಅಭ್ಯರ್ಥಿ ವಿರುದ್ದ ಕಾಂಗ್ರೆಸ್ ಪಕ್ಷ ದಲಿತ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದು ದುರದೃಷ್ಟಕರ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಇಂದಿಲ್ಲಿ ಹೇಳಿದರು.   ರಾಷ್ಟ್ರಪತಿ ಚುನಾವಣೆ ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಡಿಎ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಶೇ. 64ರಷ್ಟು ಮತ ಲಭಿಸಲಿದೆ. ಅವರ ಗೆಲುವು ಖಚಿತವಾಗಿದೆ. ಎನ್‍ಡಿಎ ಅಭ್ಯರ್ಥಿಗೆ ಜೆಡಿಯು, ವೈಎಸ್‍ಆರ್ ಕಾಂಗ್ರೆಸ್ ಪಕ್ಷಗಳು ಕೂಡ ಬೆಂಬಲ ನೀಡಿವೆ ಎಂದು ಅವರು ಹೇಳಿದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಮನಾಥ್ ಕೋವಿಂದ್ ಅವರು ದೇಶದ ರಾಷ್ಟ್ರಪತಿಯಾಗುವುದು ಹೆಮ್ಮೆಯ ವಿಷಯವಾಗಿದೆ. ಇವರ ಆಯ್ಕೆಗೆ ಅವಿರೋಧವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷ ಇವರ ವಿರುದ್ದ ಮತ್ತೊಬ್ಬ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ದುರದೃಷ್ಟಕರ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin