ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Suicide-Hang

ಹಾಸನ,ಜು.17-ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ರೂಪಕುಮಾರ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇಂದು ಬೆಳಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಈತ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮುಂಜಾನೆ ವಾಯು ವಿಹಾರಕ್ಕೆ ಬಂದ ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.   ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ಮಾಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin