ನವೆಂಬರ್‍ನಲ್ಲಿ ವಿಶ್ವ ಕನ್ನಡ ಸಮ್ಮೇಳನ

ಈ ಸುದ್ದಿಯನ್ನು ಶೇರ್ ಮಾಡಿ

Kannada--01

ಬೆಂಗಳೂರು, ಜು.18- ದಾವಣಗೆರೆಯಲ್ಲಿ ಮೂರನೆ ವಿಶ್ವ ಕನ್ನಡ ಸಮ್ಮೇಳನವನ್ನ ನವೆಂಬರ್ ತಿಂಗಳಲ್ಲಿ ಆಚರಿಸಲು ಸಾಹಿತಿಗಳು, ಕಲಾವಿದರನ್ನೊಳಗೊಂಡ ಉನ್ನತ ಮಟ್ಟದ ಸಭೆಯಲ್ಲಿಂದು ತೀರ್ಮಾನಿಸಲಾಯಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಶ್ವಕನ್ನಡ ಸಮ್ಮೇಳನ ಆಚರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು.   ಬರದ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಬೇಕೆಂಬ ಅಭಿಪ್ರಾಯ ವ್ಯಕ್ತವಾದರೂ, ನಾಡಿನ ಹಿತಾಸಕ್ತಿ ಹಿನ್ನೆಲೆಯಲ್ಲಿ ಸಮ್ಮೇಳನ ನಡೆಸಬೇಕೆಂದು ಒಮ್ಮತದ ನಿರ್ಧಾರಕ್ಕೆ ಬರಲಾಯಿತು.

ವಿಶ್ವ ಕನ್ನಡ ಸಮ್ಮೇಳನ ಆಚರಣೆಯ ಸ್ವರೂಪ, ಸಿದ್ಧತೆ, ಅತಿಥಿಗಳಿಗೆ ಆಹ್ವಾನ, ರೂಪುರೇಷೆಗಳ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ಇರುವುದರಿಂದ ವಿಶ್ವ ಕನ್ನಡ ಸಮ್ಮೇಳನವನ್ನು ಮುಂದೂಡುವುದು ಅತ್ಯಂತ ಸೂಕ್ತವಾಗಿದೆ ಎಂದರು. ಒಂದೆಡೆ ಬರ ಪರಿಸ್ಥಿತಿಯಾದರೆ, ಮತ್ತೊಂದೆಡೆ ಕನ್ನಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಾಕಷ್ಟಿವೆ. ಅಲ್ಲದೆ, ಮೊದಲೆರಡು ವಿಶ್ವಕನ್ನಡ ಸಮ್ಮೇಳನ ನಡೆದ ರೀತಿಯಲ್ಲಿ ಆಗಬಾರದು. ಏಕೆಂದರೆ, ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನವನ್ನು ಇನ್ಫೋಸಿಸ್‍ನ ನಾರಾಯಣಮೂರ್ತಿಯವರು ಉದ್ಘಾಟಿಸಿ ಮೊದಲಿಂದ ಕಡೆವರೆಗೂ ಇಂಗ್ಲಿಷ್‍ನಲ್ಲಿಯೇ ಉದ್ಘಾಟನಾ ಭಾಷಣ ಮಾಡಿದ್ದರು. ಈ ಬಾರಿ ಹಾಗೆ ಆಗಬಾರದು ಎಂದು ಸಲಹೆ ನೀಡುವುದಾಗಿ ತಿಳಿಸಿದರು.

ಸಮ್ಮೇಳನ ನಡೆಯಲಿ:

ವಿಶ್ವಕನ್ನಡ ಸಮ್ಮೇಳನವನ್ನು ನಡೆಸುತ್ತಿರುವುದನ್ನು ಸ್ವಾಗತಿಸುವುದಾಗಿ ಸಂಶೋಧಕ ಎಂ.ಚಿದಾನಂದಮೂರ್ತಿ ತಿಳಿಸಿದರು.
ವಿಶ್ವಕನ್ನಡ ಸಮ್ಮೇಳನವನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು. ಅಲ್ಲದೆ, ಮುಂದೂಡುವ ಅಗತ್ಯವೂ ಇಲ್ಲ. ರಾಜ್ಯ ಸರ್ಕಾರ ಅತ್ಯಂತ ಸರಳವಾಗಿ ಸಮ್ಮೇಳನವನ್ನು ಆಚರಿಸಲಿ. ಒಂದು ಸಮ್ಮೇಳನ ನಡೆಸುವುದರಿಂದ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಹೊರೆ ಆಗುವುದಿಲ್ಲ ಎಂದರು.  ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಸಣ್ಣ ರೈತರಿಗೆ ಸರ್ಕಾರ ನೆರವು ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin