ಶರತ್ ಹತ್ಯೆ : ಎನ್‍ಐಎ ತನಿಖೆಗೆ ವಹಿಸಲು ಸಂಸತ್‍ ಭವನದ ಎದುರು ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

BJP-Protest

ನವದೆಹಲಿ, ಜು.18-ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ತನಿಖೆಗೆ ಒಪ್ಪಿಸುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕರ್ನಾಟಕದ ಕರಾವಳಿ ಪ್ರದೇಶಗಳು ಸೇರಿದಂತೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿ ತಮ್ಮ ನೇತೃತ್ವದಲ್ಲಿ ಇಂದು ದೆಹಲಿಯ ಸಂಸತ್‍ಭವನದ ಗಾಂಧಿ ಪ್ರತಿಮೆ ಮುಂದೆ ನಡೆದ ಪಕ್ಷದ ಸಂಸದರ ಪ್ರತಿಭಟನೆ-ಧರಣಿ ನಂತರ ಬಿಎಸ್‍ವೈ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನತೆಗೆ ರಕ್ಷಣೆ ಇಲ್ಲದಂತಾಗಿದೆ. ಇದೊಂದು ಗಂಭೀರ ವಿಷಯವಾಗಿದ್ದು, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಅವರು ಮನವಿ ಮಾಡಿದರು.

ಶರತ್ ಹತ್ಯೆ ಪ್ರಕರಣದ ಬಗ್ಗೆ ಎನ್‍ಐಎ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.  ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ರಮೇಶ್ ಜಿಗಜಿಗಣಿ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ, ಶಿವಕುಮಾರ್ ಉದಾಸಿ, ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ, ಪಿ.ಸಿ.ಗದ್ದಿಗೌಡರ್, ಬಿ.ಶ್ರೀರಾಮುಲು, ಸಂಗಣ್ಣ ಕರಡಿ, ಪಿ.ಸಿ. ಮೋಹನ್, ಜಿ.ಎಂ.ಸಿದ್ದೇಶ್ವರ್, ಭಗವಂತ ಖೂಬಾ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin