ಒಂದೇ ರಾಷ್ಟ್ರ, ಒಂದೇ ಧ್ವಜ, ಯಾವುದೇ ರಾಜ್ಯಗಳ ಧ್ವಜವನ್ನು ಮಾನ್ಯ ಮಾಡುವುದಿಲ್ಲ : ಕೇಂದ್ರ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

Karnataka-Flag--01

ನವದೆಹಲಿ,ಜು.19- ಒಂದೇ ರಾಷ್ಟ್ರ, ಒಂದೇ ಧ್ವಜ ಎಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ತ್ರಿವರ್ಣ ಧ್ವಜ ಹೊರತುಪಡಿಸಿ ಯಾವುದೇ ರಾಜ್ಯಗಳ ಧ್ವಜವನ್ನು ನಾವು ಮಾನ್ಯ ಮಾಡುವುದಿಲ್ಲ ಅದಕ್ಕೆ ಕಾನೂನಿನ ಮಾನ್ಯತೆಯೂ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ನಿನ್ನೆಯಷ್ಟೆ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಕ್ಕೆ ತ್ರಿವರ್ಣ ಧ್ವಜದ ಜೊತೆಗೆ ಪ್ರತ್ಯೇಕವಾದ ಧ್ವಜ ರಚಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಒಂಭತ್ತು ಮಂದಿಯ ಸಮಿತಿಯನ್ನು ರಚಿಸಿತ್ತು.

ಇದೀಗ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ಒಂದೇ ರಾಷ್ಟ್ರ,ಒಂದೇ ಧ್ವಜ ಸಂವಿಧಾನದ 370ನೇ ವಿಧಿ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿದರೆ ಯಾವುದೇ ರಾಜ್ಯಗಳಿಗೂ ಪ್ರತ್ಯೇಕ ಧ್ವಜ ಇರುವುದಿಲ್ಲ.ಒಂದು ವೇಳೆ ಆಯಾ ರಾಜ್ಯಗಳು ಧ್ವಜ ರಚನೆ ಮಾಡಿಕೊಂಡರೆ ಅದಕ್ಕೆ ಕಾನೂನಿನ ಮಾನ್ಯತೆ ನೀಡುವುದಿಲ್ಲ ಎಂದು ಗೃಹ ಇಲಾಖೆ ವಕ್ತಾರರು ಸ್ಪಷ್ಟಪಡಿಸಿದ್ದಾರೆ.  ಸಂವಿಧಾನ ರಚನೆಯಾದಾಗಲೇ ನಾವು ತ್ರಿವರ್ಣ ಧ್ವಜವನ್ನು ರಾಷ್ಟ್ರ ಧ್ವಜವೆಂದು ಅಂಗೀಕರಿಸಿದ್ದೇವೆ. ಭಾಷಾ ವಿಂಗಡಣೆಯ ನಂತರ ಪ್ರತ್ಯೇಕ ರಾಜ್ಯಗಳು ರಚನೆಯಾದ ಮೇಲೆ ಕೆಲವು ಸಂದರ್ಭಗಳಲ್ಲಿ ಮಾತ್ರ ತಮ್ಮ ತಮ್ಮ ರಾಜ್ಯದ ಬಾವುಟಗಳನ್ನು ಹಾರಿಸುತ್ತಾರೆ. ಆದರೆ ನಿಯಮಗಳ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಎತ್ತರದ ಬಾವುಟವನ್ನು ಹಾರಿಸಬಾರದು ಎಂಬ ನಿಯಮವಿದೆ.
ಯಾವುದೇ ರಾಜ್ಯಗಳು ಧ್ವಜ ರಚಿಸಿಕೊಂಡರೂ ಅದಕ್ಕೆ ಕೇಂದ್ರ ಸರ್ಕಾರ ಮಾನ್ಯ ಮಾಡುವುದಿಲ್ಲ. ಸ್ವತಂತ್ರ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಕೆಲವು ಸಂದರ್ಭಗಳಲ್ಲಿ ತ್ರಿವರ್ಣ ಧ್ವಜವನ್ನೇ ನಾವು ರಾಷ್ಟ್ರ ಧ್ವಜವನ್ನಾಗಿ ಒಪ್ಪಿಕೊಂಡಿದ್ದೇವೆ.  ಕರ್ನಾಟಕ ಸರ್ಕಾರ ಪ್ರತ್ಯೇಕ ಧ್ವಜ ರಚನೆ ಮಾಡಿಕೊಂಡಿರೂ ಅದಕ್ಕೆ ಸಂವಿಧಾನದಲ್ಲಿ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.   ಕಳೆದ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕøತಿಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿನಾರಾಯಣ ನೇತೃತ್ವದಲ್ಲಿ 9 ಮಂದಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ವರದಿ ನೀಡುವಂತೆ ಸೂಚಿಸಿತ್ತು.

ಸಾಹಿತಿಗಳು, ಕನ್ನಡಿಗರ ಒತ್ತಾಯದಂತೆ ನಾಡಧ್ವಜ ರಚನೆ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡಿದ್ದರು. ಆದರೆ ಸರ್ಕಾರದ ಈ ತೀರ್ಮಾನಕ್ಕೆ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸೇರಿದಂತೆ ಕೆಲ ಕಾನೂನು ತಜ್ಞರಿಂದ ವಿರೋಧ ವ್ಯಕ್ತವಾಗಿತ್ತು.  ನಾಡಧ್ವಜ ರಚನೆ ಮಾಡುವ ಸರ್ಕಾರದ ಕ್ರಮ ವಿರೋಧ ಪಕ್ಷಗಳಿಗೆ ಉಗಳಲು ಆಗದ, ನುಂಗಲು ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಒಂದು ವೇಳೆ ಸರ್ಕಾರದ ಕ್ರಮವನ್ನು ವಿರೋಧಿಸಿದರೆ ಕನ್ನಡ ವಿರೋಧಿಗಳೆಂಬ ಹಣೆ ಪಟ್ಟಿ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಅಳುಕು ಕಾಡುತ್ತಿದೆ.   ಮತ್ತೊಂದೆಡೆ ನಾಡಧ್ವಜಕ್ಕೆ ಸಂವಿಧಾನದಲ್ಲಿ ಮಾನ್ಯತೆ ಸಿಗುವುದಿಲ್ಲ ಎಂಬುದು ಗೊತ್ತಿದ್ದರೂ ಸಿದ್ದರಾಮಯ್ಯ ಗಾಳಿಯಲ್ಲಿ ಗುಂಡು ಹೊಡೆಯುವ ವ್ಯರ್ಥ ಪ್ರಯತ್ನ ಮಾಡಿದ್ದಾರೆ ಎಂಬ ಮಾತುಗಳು ಆಡಳಿತ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin