ನಾಳೆ ಜೆಡಿಎಸ್ ರಾಜ್ಯ ಮಟ್ಟದ ಮಹಿಳಾ ಸಮಾವೇಶ

ಈ ಸುದ್ದಿಯನ್ನು ಶೇರ್ ಮಾಡಿ

jds

ಬೆಂಗಳೂರು,ಜು.19-ಜೆಡಿಎಸ್‍ನ ರಾಜ್ಯ ಮಟ್ಟದ ಮಹಿಳಾ ಸಮಾ ವೇಶ ನಾಳೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಮಹಿಳಾ ಮೀಸಲಾತಿಗಾಗಿ ಒತ್ತಾಯಿಸುವ ನಿರ್ಣಯವನ್ನು ನಾಳೆ ನಡೆಯುವ ಮಹಿಳಾ ಸಮಾವೇಶದಲ್ಲಿ ಜೆಡಿಎಸ್ ಕೈಗೊಳ್ಳಲಿದೆ. ವಿಧಾನಸಬೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಹಾಗೂ ಮಹಿಳಾ ಸಬಲೀಕರಣದ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ.  ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾಗ ಮಹಿಳೆ ಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಆದರೆ ಇದುವರೆಗೂ ಆ ಮಸೂದೆಗೆ ಒಪ್ಪಿಗೆ ದೊರೆತಿಲ್ಲ. ದೇವೇಗೌಡರು ಮುಖ್ಯಮಂತ್ರಿ ಯಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಶೇ.33 ರಷ್ಟು ಮೀಸಲಾತಿ ಹಾಗೂ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದ್ದನ್ನು ಪ್ರಸ್ತಾಪಿಸಲಾಗುತ್ತದೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ನಡೆಸಿದ 20 ತಿಂಗಳ ಆಡಳಿತಾವಧಿಯಲ್ಲಿ ಮಹಿಳಾ ಸಬಲೀ ಕರಣಕ್ಕೆ ತಂದಂತಹ ಯೋಜನೆಗಳ ಬಗ್ಗೆಯೂ ಪ್ರಸ್ತಾಪ ಮಾಡಲಾಗುತ್ತದೆ. ಒಟ್ಟಾರೆ ಶಾಸನ ಸಭೆಗಳಲ್ಲಿ ಮಹಿಳೆಯ ರಿಗೆ ಶೇ.33ರಷ್ಟು ಮೀಸಲಾತಿಗಾಗಿ ಒತ್ತಾಯಿಸುವ ಹಾಗೂ ಮಹಿಳಾ ಸಬಲೀಕರಣ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಂತೆ ಆಗ್ರಹಿಸುವ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin