ಪೋಷಕರಿಗೆ ಸಿಗಲಿದೆ ಮಕ್ಕಳ ಶಾಲಾ ಹಾಜರಾತಿ ಮಾಹಿತಿ

Govt-School--01

ಬೆಂಗಳೂರು, ಜು.19-ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳ ಹಾಜರಾತಿ ಮಾಹಿತಿಗಳನ್ನು ಪೋಷಕರಿಗೆ ಕಳುಹಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಹಾಜರಾತಿ ಮಾಹಿತಿಯನ್ನು ಅವರ ಪೋಷಕರಿಗೆ ರವಾನಿಸುವ ಚಿಂತನೆ ಅಗತ್ಯವಿದೆ. ಹೆಚ್ಚು ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳು ಮಾಹಿತಿಯನ್ನು ತಲುಪಿಸುವ ವ್ಯವಸ್ಥೆ ನಡೆಸುತ್ತಿವೆ ಎಂದರು.

ವಿದ್ಯಾರ್ಥಿಗಳ ಮಾಹಿತಿಯನ್ನು ಪೋಷಕರಿಗೆ ತಲುಪಿಸುವ ಚಿಂತನೆ ಇಲಾಖೆ ಮುಂದಿದ್ದು, ಇಂದಿನ ತಾಂತ್ರಿಕ ಯುಗದಲ್ಲಿ ಈ ವ್ಯವಸ್ಥೆ ಜಾರಿಗೊಳಿಸುವುದು ದೊಡ್ಡದೇನಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin