ಮಾಧವನ್ ರಾವ್ ವೃತ್ತಕ್ಕೆ ಪಾರ್ವತಮ್ಮ ರಾಜ್ ಕುಮಾರ್ ಹೆಸರು

Parvatamma Rajkumar 30

ಬೆಂಗಳೂರು, ಜು.19-ಯಡಿಯೂರು ವಾರ್ಡ್ ನ ಮಾಧವನ್ ರಾವ್ ವೃತ್ತದಿಂದ ನಾಗಸಂದ್ರದವರೆಗಿನ ರಸ್ತೆಗೆ ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಅವರ ಹೆಸರಿಡಲು ಬಿಬಿಎಂಪಿ ನಿರ್ಧರಿಸಿದೆ. ಸ್ಥಳೀಯ ಪಾಲಿಕೆ ಸದಸ್ಯೆ ಪೂರ್ಣಿಮಾ ರಮೇಶ್ ಅವರ ನಿರ್ಣಯಕ್ಕೆ ಪಾಲಿಕೆ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಇದೇ 21 ರಂದು ನಾಮಕರಣ ಕಾರ್ಯಕ್ರಮ ನಡೆಯಲಿದೆ. ಡಾ.ರಾಜ್ಕುಮಾರ್ ಪುತ್ರರಾದ ಶಿವರಾಜ್ಕುಮಾರ್, ರಾಘವೇಂದ್ರರಾಜ್ಕುಮಾರ್, ಪುನೀತ್ರಾಜ್ಕುಮಾರ್, ಕೇಂದ್ರ ಸಚಿವ ಅನಂತ್ಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮೇಯರ್ ಜಿ.ಪದ್ಮಾವತಿ, ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಡಾ.ರಾಜ್ಕುಮಾರ್ ಕುಟುಂಬ ಕನ್ನಡ ನಾಡು, ನುಡಿ ರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ. ಹಾಗಾಗಿ ಪಾರ್ವತಮ್ಮ ರಾಜ್ಕುಮಾರ್ ಹೆಸರನ್ನು ರಸ್ತೆಗೆ ನಾಮಕರಣ ಮಾಡಲು ಬಿಬಿಎಂಪಿಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin