ವಿಕೋಪಕ್ಕೆ ಹೋಗುತ್ತಿದೆ ಭಾರತ-ಚೀನಾ ಬಿಕ್ಕಟ್ಟು : ಅಮೆರಿಕ ತೀವ್ರ ಕಳವಳ

India-Vs-China--01

ಬೀಜಿಂಗ್, ಜು.19- ಡೋಕ್ಲಾಮ್ ಸಂಬಂಧ ಭಾರತ ಹಾಗೂ ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟು ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳು ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಅಮೆರಿಕ ಆಗ್ರಹಿಸಿದೆ. ವಿವಾದ ಸಂಬಂಧ ಪ್ರತಿಕ್ರಿಯ ನೀಡಿರುವ ಅಮೆರಿಕ ಸರ್ಕಾರಿ ವಕ್ತಾರ ಹೀರ್ದ ನೌರ್ಟ್ ಅವರು, ಭಾರತ ಹಾಗೂ ಚೀನಾ ನಡುವೆ ಉಂಟಾಗಿರುವ ಬಿಕ್ಕಟ್ಟು ಹಾಗೂ ಪರಿಸ್ಥಿತಿಗಳ ಕುರಿತು ಅಮೆರಿಕಾ ಕಳವಳ ವ್ಯಕ್ತಪಡಿಸುತ್ತಿದೆ. ವಿವಾದವನ್ನು ಭಾರತ ಹಾಗೂ ಚೀನಾ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಎರಡು ದೇಶಗಳು ವಿವಾದ ಕುರಿತು ಮಾತುಕತೆ ನಡೆಸಬೇಕು. ಮಾತುಕತೆ ಬಳಿಕ ಶಾಂತಿಯುತವಾಗಿ ಒಪ್ಪಂದ ಮಾಡಿಕೊಂಡು ವಿವಾದವನ್ನು ಬಗೆಹರಿಸಿಕೊಳ್ಳಬೇಕಿದೆ. ಉಭಯ ರಾಷ್ಟ್ರಗಳ ನಡುವೆ ಎದುರಾಗಿರುವ ಬಿಕ್ಕಟ್ಟು ಶಮನಗೊಳಿಸುವ ಸಲುವಾಗಿ ಭಾರತ ಹಾಗೂ ಚೀನಾ ನೇರವಾಗಿ ಮಾತುಕತೆ ನಡೆಸುವಂತೆ ಈ ಮೂಲಕ ಆಗ್ರಹಿಸುತ್ತೇವೆಂದು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಭಾರತ-ಚೀನಾ ಗಡಿಯ ಸಿಕ್ಕಿಂ ವಲಯದಲ್ಲಿ ಸಂಘರ್ಷ ನಡೆಯುತ್ತಿದ್ದು, ಗಡಿ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಚೀನೀ ಸೈನಿಕರು ಅಲ್ಲಿ ಇದ್ದ ಭಾರತೀಯ ಬಂಕರ್‍ಗಳನ್ನು ನಾಶ ಮಾಡಿದ್ದರು. ಇದೇ ಕಾರಣಕ್ಕೆ ಗಡಿ ಗಸ್ತು ನಡೆಸುವ ಯೋಧರಿಗೆ ಬೆಂಬಲವಾಗಿ ಇನ್ನಷ್ಟು ಸೈನಿಕರನ್ನು ಕಳುಹಿಸಲಾಗಿತ್ತು. ಯುದ್ಧ ಮಾಡುವ ಉದ್ದೇಶಕ್ಕೆ ಅಲ್ಲ ಎಂದು ಭಾರತ ಸ್ಪಷ್ಟಪಡಿಸಿತ್ತು. ಜೂನ್ 6 ಘಟನೆ ಬಳಿಕ ಇಂಡೋ-ಚೀನಾ ಗಡಿ ಪ್ರಕ್ಷುಬ್ಧಗೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin