ಕನ್ನಡ ಭಾಷೆ ಹಿತ ಕಾಪಾಡಲು ಸರ್ಕಾರ ಬದ್ಧ

ಈ ಸುದ್ದಿಯನ್ನು ಶೇರ್ ಮಾಡಿ

Jeorge--01

ಬೆಂಗಳೂರು, ಜು.20-ಸರ್ಕಾರ ಕನ್ನಡ ಹಿತ ಕಾಪಾಡಲು ಬದ್ಧವಾಗಿದೆ. ಅನಗತ್ಯವಾಗಿ ಯಾರೂ ಕನ್ನಡದ ವಿಷಯವಾಗಿ ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಮನವಿ ಮಾಡಿದರು. ನವೀಕೃತ ಕಂಠೀರವ ಕ್ರೀಡಾಂಗಣ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಭಾಷೆ ವಿಚಾರದಲ್ಲಿ ಸರ್ಕಾರ ಎಂದೂ ಹಿಂದೇಟು ಹಾಕುವುದಿಲ್ಲ. ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ನಾಮಫಲಕಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ದಯವಿಟ್ಟು ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಜಾರ್ಜ್ ಹೇಳಿದರು.

ಇಂದು ಬೆಳಗ್ಗೆ ಕರವೇ ಕಾರ್ಯಕರ್ತರು ಮೆಟ್ರೋ ನಿಲ್ದಾಣದಲ್ಲಿನ ಹಿಂದಿ ನಾಮಫಲಕಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಕನ್ನಡ ಭಾಷೆ ಪರವಾಗಿದೆ. ಕನ್ನಡ ಹೋರಾಟಗಾರರ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin