ಕಾಶ್ಮೀರದಲ್ಲಿ ಮೇಘ ಸ್ಫೋಟ, ಭಾರೀ ಮಳೆ : ಹಲವರ ಸಾವು

Jammu--01

ಶ್ರೀನಗರ, ಜು.20-ಮೇಘ ಸ್ಫೋಟ ಮತ್ತು ಭಾರೀ ಮಳೆಯಿಂದಾಗಿ ಹಲವರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ತತ್ರಿ ಪಟ್ಟಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬಟೋಟೆ-ಕಿಸ್ತ್‍ವಾರ್ ರಾಷ್ಟ್ರೀಯ ಹೆದ್ದಾರಿಯ ಅನೇಕ ಪ್ರದೇಶಗಳು ದಿಢೀರ್ ಪ್ರವಾಹದಿಂದ ತತ್ತರಿಸಿದ್ದು, ಹಲವಾರು ಮನೆಗಳು ಕೊಚ್ಚಿಕೊಂಡು ಹೋಗಿವೆ.  ಮೇಘಸ್ಫೋಟದ ನಂತರ ಭಾರೀ ಗುಡುಗು-ಸಿಡಿಲುಗಳೊಂದಿಗೆ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಕರ್ತರು ಶೋಧ ಮುಂದುವರಿಸಿದ್ದಾರೆ.

ಉರುಳಿಬಿದ್ದ ಕಟ್ಟಡಗಳ ಒಳಗೆ ಅನೇಕರು ಸಿಲುಕಿರುವ ಸಾಧ್ಯತೆ ಇದ್ದು ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ. ಆವಶೇಷಗಳಡಿಯಿಂದ ಇದುವರೆಗೆ ಒಬ್ಬ ಬಾಲಕ ಸೇರಿದಂತೆ ಆರು ಜನರನ್ನು ರಕ್ಷಿಸಲಾಗಿದೆ.  ಜಮ್ಮು ಪ್ರಾಂತ್ಯದಲ್ಲಿರುವ ದೋಡಾ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ವಾರ ಇದೇ ಜಿಲ್ಲೆಯಲ್ಲಿ ಧಾರಾಕಾರ ವರ್ಷಧಾರೆಯಿಂದಾಗಿ ಮನೆಯೊಂದು ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದರು. ಚಿಕಾಶ್ಮೀರ ರಾಮ್‍ಬನ್ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin