ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಆದ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Metro--01

ಬೆಂಗಳೂರು, ಜು.20-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಅಂಗಡಿಗಳು, ಸಂಘಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಸ್ಥಳಾವಕಾಶ ನೀಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದಿಷ್ಟ ಮಾನದಂಡದಂತೆ ಯಾವುದೇ ನಾಮಫಲಕಗಳಲ್ಲಿ ಕನ್ನಡ ಭಾಷೆಯ ಅಕ್ಷರಗಳು ಶೇ.60ರಷ್ಟು ದಪ್ಪವಾಗಿರಬೇಕು. ಉಳಿದ 40ರಷ್ಟು ಅನ್ಯಭಾಷೆಗೆ ಮೀಸಲಿಡಬಹುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇದು ಸಮರ್ಪಕವಾಗಿ ಜಾರಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ ಬಿಬಿಎಂಪಿಯ ಜಂಟಿ ಆಯುಕ್ತರನ್ನು ಕರೆದು ಸ್ಪಷ್ಟ ಸೂಚನೆ ನೀಡಲಾಗಿದೆ ಮತ್ತು ಲಿಖಿತ ಆದೇಶ ಹೊರಡಿಸಲಾಗಿದೆ ಎಂದರು. ಕನ್ನಡ ನಾಮಫಲಕಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ತಾಕೀತು ಮಾಡಲಾಗಿದೆ. ನಗರದ ಪ್ರಮುಖ ರಸ್ತೆಗಳಿಗೆ ಖ್ಯಾತನಾಮರ ಹೆಸರನ್ನು ನಾಮಕರಣ ಮಾಡಲಾಗಿದೆ. ಆ ಹೆಸರುಗಳು ಆಂಗ್ಲಭಾಷೆಗೆ ಭಾಷಾಂತರಿಸುವ ವೇಳೆ ಅದರ ಅರ್ಥಗಳಿಗೆ ಲೋಪವಾಗಿದೆ ಎಂಬುದರ ಬಗ್ಗೆ ದೂರು ಕೇಳಿಬಂದಿದ್ದು, ಅಂತಹ ಹೆಸರುಗಳನ್ನು ಗುರುತಿಸಿ ತಿದ್ದುಪಡಿ ಮಾಡಲು ಬಿಬಿಎಂಪಿ ಸಾಮಾನ್ಯಸಭೆಯಲ್ಲಿ ನಿರ್ಣಯಕೈಗೊಂಡು ನಂತರ ಸರ್ಕಾರದ ಅನುಮತಿಯೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin