ಮಹದಾಯಿ ವಿವಾದಕ್ಕೆ ಪ್ರಧಾನಿಯಿಂದಲೇ ಪರಿಹಾರ ಸಾಧ್ಯ : ಸಿದ್ದರಾಮಯ್ಯ

Siddaramaiah-CM

ಹುಬ್ಬಳ್ಳಿ,ಜೂ.20-ಮಹದಾಯಿ ವಿವಾದ ಪ್ರಧಾನಿಯವರ ಮಧ್ಯಸ್ಥಿತಿಕೆಯಿಂದ ಬಗೆಹರಿ ಸಲು ಮಾತ್ರ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಜಾರಿಗೆ ನಾವು ಎಲ್ಲ ಪ್ರಯತ್ನವನ್ನು ಮಾಡಿದ್ದೇವೆ. ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿತಿಕೆ ವಹಿಸಿದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.  ಮಹಾದಾಯಿ ಯೋಜನೆ ಜಾರಿಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಪದೇ ಪದೇ ಗೋವಾ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಅಲ್ಲಿಂದ ಸಕಾರಾತ್ಮಕ ಉತ್ತರ ಬಂದಿಲ್ಲ.

ಗೋವಾ ದಲ್ಲೂ ಸಹ ಬಿಜೆಪಿ ಸರ್ಕಾರವಿದೆ. ಅಲ್ಲಿನ ಬಿಜೆಪಿ ನಾಯಕರ ಹಾಗೂ ಸರ್ಕಾರದ ಮನವೊಲಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದರು.
ಮೇಲಿಂದ ಮೇಲೆ ರಾಜ್ಯ ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದನ್ನು ಬಿಟ್ಟು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕೆಂದು ಹೇಳಿದರು. ಉತ್ತರ ಕರ್ನಾಟಕ ಭಾಗದ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಈ ಯೋಜನೆ ಆದಷ್ಟು ಬೇಗ ಜಾರಿಗೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ. ಇದಕ್ಕೆ ನಮ್ಮ ಎಲ್ಲ ಪ್ರಯತ್ನವನ್ನು ಮಾಡಿದ್ದೇವೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin