ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಪತ್ನಿ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

GSS-Shivarudrappa

ಬೆಂಗಳೂರು,ಜೂ.20-ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಪತ್ನಿ ರುದ್ರಾಣಿ ಶಿವರುದ್ರಪ್ಪ(86) ಅವರು ಇಂದು ಬೆಳಗಿನ ಜಾವ 3 ಗಂಟೆಗೆ ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು.  ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ರಾತ್ರಿ 2.30ರ ಸುಮಾರಿಗೆ ಉಸಿರಾಟದಲ್ಲಿ ತೀವ್ರ ತೊಂದರೆ ಉಂಟಾಗಿದೆ. ಕೂಡಲೇ ಜೊತೆಗಿದ್ದ ಸಹಾಯಕರು ಅವರ ಮಗಳಿಗೆ ಫೋನ್ ಮಾಡಿದರು. ಸಮೀಪದ ಬಡಾವಣೆಯಲ್ಲಿ ವಾಸವಿರುವ ಮಗಳು ಜಯಂತಿ ಆ್ಯಂಬುಲೆನ್ಸ್‍ಗೆ ಕರೆ ಮಾಡಿ ವೈದ್ಯರನ್ನೂ ಕರೆದುಕೊಂಡು ಬರುವ ವೇಳೆಗೆ ಮೃತಪಟ್ಟಿದ್ದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ರುದ್ರಾಣಿ ಅವರು ಸಂಧ್ಯಾದೀಪ ಎಂಬ ವೃದ್ದಾಶ್ರಮ ನಡೆಸುತ್ತಿದ್ದರು. ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಪತಿ ರಾಷ್ಟ್ರಕವಿ ಶಿವರುದ್ರಪ್ಪ ಅವರು 4 ವರ್ಷಗಳ ಹಿಂದೆ ವಿಧಿವಶರಾಗಿದ್ದರು.

ವಿದೇಶದಲ್ಲಿರುವ ಕಿರಿಯ ಪುತ್ರ ಡಾ.ಜಿ.ಎಸ್.ಪ್ರಸಾದ್ ಬೆಂಗಳೂರಿಗೆ ಬರಲು ವಿಳಂಬವಾಗುವುದರಿಂದ ಹಿರಿಯ ಮಗ ಜಿ.ಎಸ್.ಜಯದೇವ್ ಅವರೇ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.

ಗಣ್ಯರ ಸಂತಾಪ:

ರುದ್ರಾಣಿ ಶಿವರುದ್ರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಸಾಹಿತಿಗಳು, ಗಾಯಕರು ಕಂಬನಿ ಮಿಡಿದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin