ಅನೈತಿಕ ಸಂಬಂಧ ಪ್ರಶ್ನಿಸಿದ ತಂದೆಯನ್ನೇ ಸುಪಾರಿ ಕೊಟ್ಟು ಕೊಲ್ಲಿಸಿದ ಪತ್ನಿ, ಮಗ, ಮಗಳು…!

Murder-Gokak

ಗೋಕಾಕ, ಜು.21- ಅನೈತಿಕ ಸಂಬಂಧ ಪ್ರಶ್ನಿಸಿದ ತಂದೆಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ, ಮಗ, ಮಗಳು ಸೇರಿದಂತೆ ಆರು ಮಂದಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ತನ್ನ ಮಗಳ ಅನೈತಿಕ ಸಂಬಂಧ ಪ್ರಶ್ನಿಸಿದ್ದ ತಂದೆ ಕೆಂಚಪ್ಪ ನೆಗಿನಾಳ ಎಂಬುವರನ್ನು ಪತ್ನಿ, ಮಗ, ಮಗಳು ಸೇರಿ 70 ಸಾವಿರ ಸುಪಾರಿ ನೀಡಿ ಕೊಲೆ ಮಾಡಿಸಿ ಪಟ್ಟಣದ ಹೊರವಲಯದ ಬೆಟ್ಟದ ಗುಹೆಯಲ್ಲಿ ದೇಹವನ್ನು ಮುಚ್ಚಿಹಾಕಿದ್ದರು.

ಈ ಸಂಬಂಧ ಗೋಕಾಕ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದು ಕೊಲೆ ಎಂದು ಗೊತ್ತಾಗಿ ಕೊಲೆಗಾರರ ಪತ್ತೆಗಾಗಿ ಪೊಲೀಸ್ ತಂಡ ರಚನೆ ಮಾಡಿದ್ದರು.  ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಂಚಪ್ಪ ನೆಗಿನಾಳ ಅವರ ಪತ್ನಿ, ಮಗ, ಮಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ 70 ಸಾವಿರ ಸುಪಾರಿ ನೀಡಿ ಕೊಲೆ ಮಾಡಿಸಿರುವುದಾಗಿ ಬಾಯಿಬಿಟ್ಟಿದ್ದಾರೆ.  ಈ ಆರು ಮಂದಿಯನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin