ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ : ಆಗಸ್ಟ್ ತಿಂಗಳ ಅಂತ್ಯಕ್ಕೆ ವರದಿ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Arkavathi--01

ಬೆಂಗಳೂರು,ಜು.21-ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಆಗಸ್ಟ್ ತಿಂಗಳ ಅಂತ್ಯಕ್ಕೆ ವರದಿ ನೀಡಲು ಮುಂದಾಗಿದೆ. ಈಗಾಗಲೇ ವರದಿ ಸಂಪೂರ್ಣವಾಗಿ ಸಿದ್ದಪಡಿಸಲಾಗಿದೆ. ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗುವುದರಿಂದ ವರದಿಯನ್ನು ಮುದ್ರಣಕ್ಕೆ ಕಳುಹಿಸಿಕೊಡಲಾಗುವುದು. ಆಗಸ್ಟ್ ಅಂತ್ಯಕ್ಕೆ ಸರ್ಕಾರಕ್ಕೆ ವರದಿ ನೀಡುವುದಾಗಿ ಆಯೋಗದ ಕಾರ್ಯದರ್ಶಿ ಎನ್.ಶ್ರೀವತ್ಸ ಕೇದಿಲಯ ತಿಳಿಸಿದ್ದಾರೆ.

ಆರೋಪ ಮತ್ತು ಪ್ರತ್ಯಾರೋಪಗಳಿಗೆ ಸಂಬಂಧಿಸಿದಂತೆ ಎರಡು ಕಡೆಯಿಂದ ಮಾಹಿತಿ ಪಡೆಯಲಾಗಿದೆ. ಸಾಕ್ಷಾಧಾರಗಳ ಹೇಳಿಕೆಯನ್ನು ದಾಖಲಿಸಿ ವರದಿಯನ್ನು ಸರ್ಕಾರಕ್ಕೆ ನೀಡಲು ಆಯೋಗ ಸಿದ್ದವಾಗಿದೆ ಎಂದು ಹೇಳಿದ್ದಾರೆ.   ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ವೇಳೆ ಪಕ್ಷದ ಹೈಕಮಾಂಡ್‍ಗೆ ದೇಣಿಗೆ ನೀಡಲು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸದನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದು ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಭಾರೀ ವಾಕ್ಸಮರವನ್ನೇ ಸೃಷ್ಟಿಸಿತ್ತು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯ ಮಾಡಲಾಗಿತ್ತು. ಅಂತಿಮವಾಗಿ ರಾಜ್ಯ ಸರ್ಕಾರ 2014ರಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ನೇತೃತ್ವದಲ್ಲಿ ಆಯೋಗವನ್ನು ರಚನೆ ಮಾಡಿತ್ತು.
2004ರಲ್ಲಿ ಫೆಬ್ರವರಿ 23ರಿಂದ 2014, ಜೂನ್ ತಿಂಗಳವರೆಗೆ ಅರ್ಕಾವತಿ ಲೇಔಟ್‍ನಲ್ಲಿ ಡಿನೋಟಿಫೈ ಮಾಡಿರುವ ಬಗ್ಗೆ ತನಿಖೆ ನಡೆಸಬೇಕೆಂದು ಆಯೋಗಕ್ಕೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.

ಸರಿಸುಮಾರು ಎರಡು ವರ್ಷಗಳ ಕಾಲ ಹೆಚ್ಚು ತನಿಖೆ ನಡೆಸಿರುವ ಆಯೋಗವು ಇದೀಗ ಸರ್ಕಾರಕ್ಕೆ ವರದಿ ನೀಡಲು ಸಿದ್ದವಾಗಿರುವುದರಿಂದ ಯಾರ ತಲೆಗೆ ಉರುಳಾಗಲಿದೆ ಎಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಯೋಗ ನೀಡುವ ವರದಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‍ಗೆ ಅತಿ ಮಹತ್ವ ಎನಿಸಿದೆ. ಲೋಕಸಭೆ ಚುನಾವಣೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿ 500 ಕೋಟಿ ಹಣವನ್ನು ಹೈಕಮಾಂಡ್‍ಗೆ ನೀಡಿದ್ದಾರೆಂಬ ದೂರು ಇದಾಗಿದೆ.

ನಾವು ಎಲ್ಲಿಯೂ ಕಾನೂನು ಉಲ್ಲಂಘಿಸಿ ಡಿನೋಟಿಫೈ ಮಾಡಿಲ್ಲ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನಿರ್ದೇಶನದಂತೆ ರೀಡು ಮಾಡಲಾಗಿದೆ ಎಂಬುದು ಸರ್ಕಾರದ ವಾದವಾಗಿತ್ತು. ರೀಡು ಹೆಸರಿನಲ್ಲೇ ಡಿನೋಟಿಫೈ ಆಗಿದೆ ಎಂದು ಶೆಟ್ಟರ್ ಆರೋಪವಾಗಿದೆ.  ಹೀಗಾಗಿ ಕೆಂಪಣ್ಣ ಆಯೋಗ ನೀಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಲೆದಂಡವಾಗಲಿದೆಯೇ ಇಲ್ಲವೇ ಕಾಂಗ್ರೆಸ್‍ಗೆ ಮುಳುವಾಗುವುದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್‍ಗೂ ಕಂಟಕವಾಗಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin