ಕೊನೆಯ ಆಷಾಢ ಶುಕ್ರವಾರ, ಚಾಮುಂಡಿ ಬೆಟ್ಟಕ್ಕೆ ಹರಿದುಬಂದ ಜನಸಾಗರ

ಈ ಸುದ್ದಿಯನ್ನು ಶೇರ್ ಮಾಡಿ

Mysuru--02

ಮೈಸೂರು, ಜು.21- ಕೊನೆಯ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಮುಂಜಾನೆ 4ರಿಂದಲೇ ಸಾಲುಗಟ್ಟಿ ನಿಂತು ದೇವಿಯ ದರ್ಶನ ಪಡೆದರು. ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಪ್ರತಿವಾರವೂ ಒಂದೊಂದು ದೇವಿಯ ಅಲಂಕಾರ ಮಾಡಲಾಗಿತ್ತು. ಇಂದು ಕೊನೆಯ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡೇಶ್ವರಿ ಅಲಂಕಾರ ಮಾಡಲಾಗಿತ್ತು. ದೇವಿಯು ಹಸಿರು ಸೀರೆಯಿಂದ ಕಂಗೊಳಿಸುತ್ತಿದ್ದಳು.

Mysuru--01

ಬೆಳಗ್ಗೆ 4 ಗಂಟೆಗೆ ಕಳಶ ಪೂಜೆ, ಗಣಪತಿ ಪೂಜೆ ನೆರವೇರಿಸಿ ನಂತರ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ದೇವಿಕೆರೆಯಿಂದ ಜಲ ತಂದು ಜಲಾಭಿಷೇಕ ಮಾಡಿ ನಂತರ ವಿವಿಧ ಹೂವಿಗಳಿಂದ ದೇವಿಗೆ ಅಲಂಕರಿಸಿ ನಂತರ ಭಕ್ತಾದಿಗಳಿಗೆ ದರ್ಶನ ಪಡೆಯಲು ಅನುವು ಮಾಡಿಕೊಡಲಾಯಿತು.
ಇಂದು ಮುಂಜಾನೆಯೇ ಜಿಟಿಜಿಟಿ ಮಳೆ ಸುರಿಯುತ್ತಿತ್ತು. ತಂಪಾದ ಗಾಳಿಯಿದ್ದರೂ ಭಕ್ತಾದಿಗಳು ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತಿ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು.

Mysuru--03

ಜಿಲ್ಲಾಧಿಕಾರಿ ರಂದೀಪ್ ದೇವಿಯ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೊನೆಯ ಆಷಾಢ ಶುಕ್ರವಾಗಿದ್ದು, ನಾನು ದೇವಿಗೆ ಪೂಜೆ ಸಲ್ಲಿಸಿದ್ದೇನೆ. ಈ ಅವಧಿಯಲ್ಲಿ ನಾಡಿನಾದ್ಯಂತ ಉತ್ತಮ ಮಳೆ ಸಹ ಆಗಿದೆ. ನಾನು ದೇವರ ಬಳಿ ಪೂಜೆ ಸಲ್ಲಿಸಿ ಪ್ರಾರ್ಥಿಸುತ್ತೇನೆ ಎಂದರು.
ಇಂದು ನನ್ನ ಮಗಳ ಒಂದು ವರ್ಷದ ಹುಟ್ಟುಹಬ್ಬವಾಗಿರುವುದರಿಂದ ಕುಟುಂಬ ಸಮೇತ ದೇವಿ ದರ್ಶನ ಪಡೆದಿದ್ದೇವೆ ಎಂದರು. ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದರು. ಪ್ರತಿ ವಾರದಂತೆ ಈ ವಾರವೂ ಸಹ ತಿಂಡಿ-ತಿನಿಸುಗಳನ್ನು ಹಂಚಲಾಯಿತು. ಬೆಟ್ಟಕ್ಕೆ ಆಗಮಿಸಿದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ, ಹೂವನ್ನು ನೀಡಲಾಯಿತು. ಈ ವೇಳೆ ಸುತ್ತೂರು ಮಠದ ವತಿಯಿಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ದೇವಿಗೆ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಸ್ವತಃ ಅವರೇ ಪ್ರಸಾದ ವಿತರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin