ಗುಜರಾತ್‍ನ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾಗೆ ಬಿಜೆಪಿ ಗಾಳ

Shankar

ಅಹಮದಾಬಾದ್ ,ಜು.21-ಗುಜರಾತ್‍ನ ಮಾಜಿ ಮುಖ್ಯಮಂತ್ರಿ ಹಿರಿಯ ಕಾಂಗ್ರೆಸ್ ಮುಖಂಡ ಶಂಕರ್ ಸಿಂಗ್ ವಘೇಲಾ ಪಕ್ಷ ತೊರೆಯಲು ಮುಂದಾಗಿದ್ದಾರೆ. ಇಂದು ಸಂಜೆಯೊಳಗೆ ವಘೇಲಾ ಅಧಿಕೃತವಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಇಲ್ಲವೇ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಸಾಧ್ಯತೆ ಇದೆ.
ಡಿಸೆಂಬರ್‍ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ವಘೇಲಾ ಪಕ್ಷ ತೊರೆಯುತ್ತಿರುವುದು ಕಾಂಗ್ರೆಸ್‍ಗೆ ನುಂಗಲಾರದ ತುತ್ತಾಗಿದೆ. ಇಂದು 75ನೇ ವಸಂತಕ್ಕೆ ಕಾಲಿಡುತ್ತಿರುವ ವಘೇಲಾ ಅವರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.

ಖುದ್ದು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ವಘೇಲಾ ಜೊತೆ ಮಾತುಕತೆ ನಡೆಸಿದ್ದು , ಪಕ್ಷಕ್ಕೆ ಬಂದರೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ.  ಸರಿಯಾಗಿ 17 ವರ್ಷಗಳ ಹಿಂದೆ ಬಿಜೆಪಿ ತೊರೆದು ರಾಷ್ಟ್ರೀಯ ಜನತಾ ಪಾರ್ಟಿ ಕಟ್ಟಿದ್ದ ವಘೇಲಾ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಗುಜರಾತ್‍ನಲ್ಲಿ ಅತ್ಯಂತ ಪ್ರಭಾವಿ ನಾಯಕ, ಹಿರಿಯ ಕಟ್ಟಾಳಾಗಿರುವ ಅವರು ಕಾಂಗ್ರೆಸ್ ತೊರೆದರೆ ಪಕ್ಷಕ್ಕೆ ಭಾರೀ ಹಾನಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಕಾಂಗ್ರೆಸ್‍ನಲ್ಲಿ ಹೆಚ್ಚುತ್ತಿರುವ ಗುಂಪುಗಾರಿಕೆ ಹಾಗೂ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವುದಕ್ಕೆ ಬೇಸತ್ತು ವಘೇಲಾ ಪಕ್ಷ ತೊರೆಯುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕೆಂದು ವಘೇಲಾ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದರು. ಆದರೆ ವರಿಷ್ಠರು ಇದಕ್ಕೆ ಸೊಪ್ಪು ಹಾಕಲಿಲ್ಲ.

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸೋಣ. ಪಕ್ಷ ಅಧಿಕಾರಕ್ಕೆ ಬಂದರೆ ಬೇಡಿಕೆಯನ್ನು ಪರಿಗಣಿಸುವುದಾಗಿ ಖುದ್ದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭರವಸೆ ಕೊಟ್ಟಿದ್ದರು. ಅದಲ್ಲದೆ ಸ್ಥಳೀಯ ನಾಯಕರು ಪಕ್ಷ ಸಂಘಟನೆ, ಗುಂಪುಗಾರಿಕೆ, ಪರಸ್ಪರ ಒಬ್ಬರ ವಿರುದ್ದ ಮತ್ತೊಬ್ಬರನ್ನು ಎತ್ತಿಕಟ್ಟುವುದು, ಅಲ್ಲದೆ ರಾಜ್ಯದಲ್ಲಿ ಪಕ್ಷ ದಿನದಿಂದ ದಿನಕ್ಕೆ ಬಲಹೀನವಾಗಿ ಬಿಜೆಪಿ ಪ್ರಬಲವಾಗುತ್ತಿರುವುದರಿಂದ ವಘೇಲಾ ಕಾಂಗ್ರೆಸ್‍ಗೆ ಗುಡ್ ಬೈ ಹೇಳುವ ನಿರ್ಧಾರ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin