ಗೋರಕ್ಷಕರಿಗೆ ರಕ್ಷಣೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕಟ್ಟಪಣೆ

ಈ ಸುದ್ದಿಯನ್ನು ಶೇರ್ ಮಾಡಿ

Supreme-Court-Cow

ನವದೆಹಲಿ, ಜು.21-ಗೋರಕ್ಷಣೆ ಹೆಸರಿನಲ್ಲಿ ಹಿಂಸಾಕೃತ್ಯಗಳನ್ನು ಎಸಗುವ ಗೋರಕ್ಷಕರಿಗೆ ಯಾವುದೇ ರೀತಿಯ ರಕ್ಷಣೆ ನೀಡದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ. ಅಲ್ಲದೇ ಗೋರಕ್ಷಕರ ಹಿಂಸಾಚಾರ ಕೃತ್ಯಗಳ ಕುರಿತು ಸರ್ಕಾರಗಳ ಪ್ರತಿಕ್ರಿಯೆಯನ್ನೂ ಸಹ ಕೇಳಿದೆ.   ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ನೇತೃತ್ವದ ಪೀಠವು ಇಂದು ಸರ್ಕಾರದ ಹೇಳಿಕೆಗೆ ಪ್ರತಿಯಾಗಿ ಈ ಸೂಚನೆಗಳನ್ನು ನೀಡಿತು.
ದೇಶದಲ್ಲಿ ಗೋರಕ್ಷಕರಿಗೆ ಯಾವುದೇ ರೀತಿ ಬೆಂಬಲವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ.

ಈ ಸಂಬಂಧ ಕಾನೂನು ಕ್ರಮಗಳನ್ನು ಕೈಗೊಳ್ಳಲು ಆಯಾ ರಾಜ್ಯಗಳ ವ್ಯಾಪ್ತಿಗೆ ಒಳಪಡುತ್ತದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಹಿಂಸಾಕೃತ್ಯಗಳನ್ನು ನಡೆಸಿ ಗೋರಕ್ಷಕರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin