ಜೆಡಿಎಸ್‍ ಟಿಕೆಟ್ ಸಿಗದಿದ್ದರೆ ತಿಪಟೂರು ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧೆ : ಶಾಂತಕುಮಾರ್

Shantakumar--01

ತಿಪಟೂರು, ಜು.21- ಎಂಎಲ್‍ಎ ಅಭ್ಯರ್ಥಿಯಾಗಿ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಜೆಡಿಎಸ್‍ನಿಂದ ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆಂದು ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ತಿಳಿಸಿದರು. ನಗರದ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ತಮ್ಮ ಹುಟ್ಟುಹಬ್ಬ ಪ್ರಯುಕ್ತ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಿ ಮಾತನಾಡಿದ ಅವರು, ನಾನು ತಿಪಟೂರಿಗೆ ಹಣ ಮಾಡಲು ಬಂದಿಲ್ಲ. ಕಷ್ಟದಲ್ಲಿರುವವರಿಗೆ ಸಹಾಯ, ರೈತರಿಗೆ ಕೈಲಾದ ಸೇವೆ ಮಾಡುತ್ತಾ ಸಮಾಜಮುಖಿ ಕೆಲಸ ಮಾಡುವುದೇ ನನ್ನ ಮುಖ್ಯ ಉದ್ದೇಶ ಎಂದರು.

ಮುಂದಿನ ದಿನಗಳಲ್ಲಿ ಕಷ್ಟದಲ್ಲಿರುವ ರೈತರಿಗೆ ಅನುಕೂಲವಾಗುವಂತೆ ರೈತರ ಬಾಗಿಲಿಗೆ ಹೋಗಿ ಸಾಲಮನ್ನಾ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ತಾಲ್ಲೂಕಿನ ಅಭಿವೃದ್ದಿ ಮತ್ತು ರೈತರ ಅಭಿವೃದ್ದಿಗೆ ನಾನು ಸದಾ ಸಿದ್ದನಿದ್ದೇನೆ ಎಂದರು. ಈ ಸಂದರ್ಭದಲ್ಲಿ ಸ್ಪಂದನ ದೀಕ್ಷ ಹೆಲ್ತ್‍ಕೇರ್ ಹಾಗೂ ನಾರಾಯಣ ನೇತ್ರಾಲಯ, ಡಾ. ರಾಜ್‍ಕುಮಾರ್ ನೇತ್ರದಾನ ಕೇಂದ್ರ ಬೆಂಗಳೂರು ಇವರ ಸಹಯೋಗದೊಂದಿಗೆ ನೇತ್ರದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಾಂತಕುಮಾರ್ ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಜನರು ನೇತ್ರದಾನ ಮಾಡುವ ಅರ್ಜಿ ಸಲ್ಲಿಸಿದರು.

ಸ್ಪಂದನ ದೀಕ್ಷ ಹೆಲ್ತ್‍ಕೇರ್ ಮಾಲೀಕ ರವಿಕುಮಾರ್, ಯುವ ಮುಖಂಡರಾದ ಸುದರ್ಶನ ಲೋಕೇಶ್, ಅಭಿಮಾನಿ ಸಂಘದ ಕಾರ್ಯದರ್ಶಿ ಹೇಮಂತ್, ಬಿ.ಟಿ.ಕುಮಾರ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin