ಮಹಾಮಸ್ತಕಾಭಿಷೇಕ : 175 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸರ್ಕಾರ ಅನುಮೋದನೆ

ಈ ಸುದ್ದಿಯನ್ನು ಶೇರ್ ಮಾಡಿ

Mahamastakabhisheka--01

ಬೆಂಗಳೂರು, ಜು.21- ಶ್ರವಣಬೆಳಗೊಳದ ಗೊಮ್ಮಟೇಶ್ವರ ಮೂರ್ತಿಗೆ 2018ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ 175 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಮೊದಲ ಕಂತಿನಲ್ಲಿ 43.75 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಗೆ ಈ ಹಣ ಬಿಡುಗಡೆ ಮಾಡಲಾಗಿದ್ದು, ಉದ್ದೇಶಿತ ಕಾಮಗಾರಿಗಳ ಅಂದಾಜು ಪಟ್ಟಿಗೆ ಸಂಬಂಧಿಸಿದ ಪ್ರಾಧಿಕಾರದಿಂದ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆ ಷರತ್ತು ವಿಧಿಸಿದೆ.

ಪಾರದರ್ಶಕ ಕಾಯ್ದೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತು ವಿಧಿಸಲಾಗಿದ್ದು, ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಬಳಸಿಕೊಳ್ಳಲು ಹೊಸ ಬ್ಯಾಂಕ್ ಖಾತೆಯನ್ನು ತೆರೆದು ಲೆಕ್ಕ ಪತ್ರಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಮಂಜೂರಾಗಿರುವ ಅನುದಾನವನ್ನು 4 ಕಂತುಗಳಲ್ಲಿ ಬಿಡುಗಡೆ ಮಾಡುವುದಾಗಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin