ಕೆಆರ್‍ಎಸ್‍ಗೆ ಒಳಹರಿವು ಹೆಚ್ಚಳ

KRS-Dam

ಮೈಸೂರು,ಜು.22- ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಮಳೆ ಸುರಿಯುತ್ತಿರುವುದರಿಂದ ಕೆಆರ್‍ಎಸ್ ಡ್ಯಾಮ್‍ಗೆ ಒಳಹರಿವು ಹೆಚ್ಚಾಗಿದೆ. ಕೆಆರ್‍ಎಸ್‍ಗೆ ಇಂದು 20 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಮೂರು ಸಾವಿರ ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳು. ಇಂದಿನ ಮಟ್ಟ 83 ಅಡಿಗಳು. ಜಲಾಶಯದಿಂದ ಮೂರು ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಬೆಳೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿದರು.

ಕಬಿನಿ ಜಲಾಶಯದ ಗರಿಷ್ಠ ಮಟ್ಟ 2,284 ಅಡಿಗಳು ಇಂದಿನ ಮಟ್ಟ 2.275 ಮಟ್ಟ ಇದ್ದು 10 ಅಡಿ ಬಾಕಿ ಉಳಿದಿದೆ. 18 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವು ಬರುತ್ತಿದ್ದು, ಡ್ಯಾಮ್‍ನಿಂದ ಒಂದು ಸಾವಿರ ಕ್ಯೂಸೆಕ್ಸ್ ನೀರನ್ನು ಹೊಡಬಿಡಲಾಗುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin