ಗ್ಯಾಂಗ್‍ರೇಪ್ ಸಂತ್ರಸ್ತೆ ಮೇಲೆ ಮತ್ತೆ ಸಾಮೂಹಿಕ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

GangRape--01

ಮುಂಬೈ, ಜು.22-ಗ್ಯಾಂಗ್‍ರೇಪ್‍ಗೆ ಒಳಗಾಗಿದ್ದ ಸಂತ್ರಸ್ತೆಯೊಬ್ಬಳ ಮೇಲೆ ಮತ್ತೆ ಸಾಮೂಹಿಕ ಅತ್ಯಾಚಾರ ಎಸಗಿರುವ ನೀಚ ಕೃತ್ಯವೊಂದು ಮುಂಬೈನಲ್ಲಿ ನಡೆದಿದೆ. ಕಳೆದ ಅಕ್ಟೋಬರ್‍ನಲ್ಲಿ ಐವರು ದುಷ್ಕರ್ಮಿಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 18 ವರ್ಷದ ಮಾನಸಿಕ ಅಸ್ವಸ್ಥ ಯುವತಿಯನ್ನು ಇಬ್ಬರು ಆಟೋ ಚಾಲಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಈ ಹೀನ ಕೃತಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ದಿಂದೋಶಿ ಎಂಬಲ್ಲಿ ಪೋಷಕರ ಜೊತೆ ವಾಸವಾಗಿರುವ ಈಕೆ ಕಳೆದ ಶನಿವಾರ ನಾಪತ್ತೆಯಾಗಿದ್ದಳು. ಆಕ್ಟೋಬರ್‍ನಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಷ್ಕರ್ಮಿಗಳನ್ನು ಗುರುತಿಸುವ ಪೆರೇಡ್ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಅದಕ್ಕೆ ಎರಡು ದಿನಗಳ ಹಿಂದೆಯೇ ಈಕೆ ನಾಪತ್ತೆಯಾಗಿದ್ದಳು. ಪೋಷಕರು ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.  ಪೋ ಷಕರು ಇಲ್ಲದ ಸಮಯದಲ್ಲಿ ಮನೆಯಿಂದ ಹೊರಗೆ ಬಂದ ಈಕೆಯನ್ನು ಇಬ್ಬರು ಆಟೋಚಾಲಕರು ಅಪಹರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ಧಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಯುವತಿ ಮನೆಗೆ ಹಿಂದಿರುಗಿದ ಬಳಿಕ ಯುವತಿ ಮತ್ತು ಪೋಷಕರ ಹೇಳಿಕೆಯನ್ನು ಆಧರಿಸಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶುಕ್ರವಾರ ಕಂಡಿವ್ಲಿ ಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.  ಮಾನಸಿಕ ಅಸ್ವಸ್ಥೆಯಾದ ಆಕೆ ಕಳೆದ ಅಕ್ಡೋಬರ್‍ನಲ್ಲಿ ಹೊಟ್ಟೆ ನೋವಿನಿಂದ ನರಳುತ್ತಿದ್ದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಆಕೆ ಗರ್ಭಿಣಿ ಎಂದು ತಿಳಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin