ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಡ್ತಿನಿ : ಜಮೀರ್ ಸವಾಲ್

Jameer-ahamad

ಬೆಂಗಳೂರು. ಜು.22 : ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಮಾಧ್ಯಮದವರ ಕೈಯಲ್ಲಿ ಇಡುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ. ಕ್ಷೇತ್ರದ ಜನ ನನ್ನ ಇಷ್ಟಪಟ್ಟಿದ್ದಾರೆಯೇ ಹೊರತು ದೇವೇಗೌಡ್ರನ್ನಲ್ಲ. ನನ್ನನ್ನು ಮಗನಂತೆ ಭಾವಿಸಿದ್ದಾರೆ. ನನ್ನ ಮುಖ ನೋಡಿ ಜೆಡಿಎಸ್‌ಗೆ ಮತ ಹಾಕ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲ್ಲ. ಗೆಲ್ಲುವುದಿರಲಿ ಈ ಕ್ಷೇತ್ರದಲ್ಲಿ ಠೇವಣಿಯೂ ಸಿಗಲ್ಲ. ನಿನ್ನೆ ದೇವೇಗೌಡರು ಹೇಳಿದ ಮಾತು ನನಗೆ ಬೇಸರ ತರಿಸಿದೆ ಎಂದರು. ನನ್ನ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ಒಂದು ತಿಂಗಳಿನಿಂದ ಪ್ರಯತ್ನಪಟ್ಟಿದ್ದರು. ಆದರೆ, ನಿನ್ನೆ ನಡೆದ ಜೆಡಿಎಸ್ ಸಮಾವೇಶಕ್ಕೆ ಎಷ್ಟು ಜನ ಬಂದಿದ್ದರು ಎನ್ನುವುದು ಎಲ್ರಿಗೂ ಗೊತ್ತಿದೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ನಾನು ನನ್ನ ಸ್ವಂತ ಬಲದಿಂದ ಗೆದ್ದಿದ್ದೇನೆ ಎಂದರು.

ದೇವೇಗೌಡರ ಬಗ್ಗೆ ತುಂಬಾ ಗೌರವವಿದೆ. ಆದರೆ, ಈ ರೀತಿ ರಾಜಕೀಯ ಮಾಡ್ತಾರೆ ಅಂತಾ ಅಂದ್ಕೊಂಡಿರಲಿಲ್ಲ. ನಾನು ಯಾವತ್ತೂ ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಜಮೀರ್ ಅಹ್ಮದ್ ಮುಖ ನೋಡಿ ಚುನಾವಣೆಯಲ್ಲಿ ಜೆಡಿಎಸ್ ಗೆ ಮತ ಹಾಕಿದ್ದಾರೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜನ ನನ್ನನ್ನು ಇಷ್ಟಪಡುತ್ತಾರೆ ದೇವೇಗೌಡರನ್ನಲ್ಲ. ಎಲ್ಲ ಸಮುದಾಯದ ಜನರು ಜಮೀರ್ ನಮ್ಮ ಮನೆಯ ಮಗ ಎಂದು ಭಾವಿಸಿದ್ದಾರೆ. ಅಲ್ಪಸಂಖ್ಯಾತರ ಬಗ್ಗೆ ದೇವೇಗೌಡರಿಗೆ ಕಾಳಜಿಯಿಲ್ಲ ಎಂದು ಆರೋಪಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin