ಜನರಲ್ಲಿ ಗೊಂದಲ ಮೂಡಿಸಲು ಪ್ರತ್ಯೇಕ ಲಿಂಗಾಯಿತ ಧರ್ಮದ ಶಿಫಾರಸು : ಬಿಎಸ್ವೈ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

yadi

ಶಿವಮೊಗ್ಗ, ಜು.22- ರಾಜ್ಯದ ಜನತೆಯಲ್ಲಿ ಗೊಂದಲ ಮೂಡಿಸುವ ದುರುದ್ದೇಶದಿಂದ ಲಿಂಗಾಯಿತ ಸಮುದಾಯವನ್ನು ಪ್ರತ್ಯೇಕ ಧರ್ಮ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯಿತ ಮತ್ತು ವೀರಶೈವ ಎಂಬುದು ಪ್ರತ್ಯೇಕವಲ್ಲ. ಈಗಾಗಲೇ ಈ ಬಗ್ಗೆ ಹಲವಾರು ಚರ್ಚೆಗಳು ನಡೆದು ಸಮಸ್ಯೆ ನಿವಾರಣೆಯಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದುರುದ್ದೇಶದಿಂದಲೇ ಜನತೆಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಲಿಂಗಾಯಿತ ಸಮುದಾಯವನ್ನು ಪ್ರತ್ಯೇಕ ಧರ್ಮ ಮಾಡುವ ಅಗತ್ಯವಿಲ್ಲ. ಈ ಸಮುದಾಯ ಈಗಾಗಲೇ ಹಿಂದು ಧರ್ಮದ ಭಾಗವಾಗಿ ನಾವು ಗುರುತಿಸಿಕೊಂಡಿದ್ದೇವೆ. ಬೆರಳೆಣಿಕೆಯಷ್ಟು ಮಂದಿ ಕೇಳಿದ ತಕ್ಷಣ ಒಂದು ಸಮುದಾಯವನ್ನು ಪ್ರತ್ಯೇಕ ಧರ್ಮ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಯಾವುದೇ ಕಾರಣಕ್ಕೂ ಲಿಂಗಾಯಿತ ಸಮುದಾಯವನ್ನು ಪ್ರತ್ಯೇಕ ಧರ್ಮ ಮಾಡಲು ಅವಕಾಶ ನೀಡುವುದಿಲ್ಲ. ಹಾಗೊಂದು ವೇಳೆ ಸರ್ಕಾರ ತಪ್ಪು ಹೆಜ್ಜೆ ಇಟ್ಟರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಮುದಾಯದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಶೀಘ್ರದಲ್ಲೇ ಮುಖಂಡರ ಜತೆ ಸಭೆ ನಡೆಸಲಾಗುವುದು. ನಮ್ಮನಮ್ಮಲ್ಲಿ ಗೊಂದಲ ಉಂಟಾಗುವುದು ಬೇಡ ಎಂದು ಬಿಎಸ್‍ವೈ ಮನವಿ ಮಾಡಿದರು.

ನ್ಯಾಯಾಲಯಕ್ಕೆ ದೂರು:

ರಾಜ್ಯ ಸರ್ಕಾರ ಸಾರ್ವಜನಿಕರ ವಿರೋಧದ ನಡುವೆ ಕೆರೆಗಳನ್ನು ಡಿನೋಟಿಫೈ ಮಾಡಲು ಮುಂದಾದರೆ ಸುಪ್ರೀಂಕೋರ್ಟ್ ಇಲ್ಲವೇ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವುದಾಗಿ ಅವರು ಎಚ್ಚರಿಸಿದ್ದಾರೆ. ಸರ್ಕಾರದ ಸಚಿವರೇ ಡಿನೋಟಿಫೈ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಹಣ ಸಂಗ್ರಹಿಸಲು ಸರ್ಕಾರ ಡಿನೋಟಿಫೈ ಮಾಡಲು ಮುಂದಾಗಿದೆ ಎಂದು ದೂರಿದರು.

ಕೆರೆಗಳನ್ನು ಸಂರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ. ಇಲ್ಲ ಸಚಿವರ ವಿರೋಧದ ನಡುವೆಯೂ ಡಿನೋಟಿಫೈ ಮಾಡುತ್ತಿರುವುದು ಯಾವ ಕಾರಣಕ್ಕಾಗಿ ಎಂಬುದು ಅರ್ಥವಾಗುತ್ತಿಲ್ಲ. ಸಾರ್ವಜನಿಕರ ವಿರೋಧದ ನಡುವೆಯೂ ಡಿನೋಟಿಫೈ ಮಾಡಿದರೆ ಸರ್ಕಾರದ ವಿರುದ್ಧ ಪಕ್ಷ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಬಿಎಸ್‍ವೈ ಗುಡಿಗಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin