ತನ್ನ ಲಾರಿಗೆ ತಾನೇ ಸಿಲುಕಿ ಸಾವನ್ನಪ್ಪಿದ ಚಾಲಕ

ತುಮಕೂರು, ಜು.22-ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತನ್ನ ಲಾರಿಗೆ ತಾನೇ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಸ್ಥಾನದ ಬಲೂನಾಚಾರ್ ಗ್ರಾಮದ ಬಾಲಚಂದ್ರ(40) ಮೃತಪಟ್ಟ ಲಾರಿ ಚಾಲಕ. ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ಮಧ್ಯರಾತ್ರಿ ಶಿರಾ ತಾಲೂಕಿನ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 48ರ  ಸೋಮಸಾಗರ ಗೇಟ್ ಬಳಿ ಚಾಲಕ ರಸ್ತೆ ಬದಿ ಲಾರಿ ನಿಲ್ಲಿಸಿ ಮುಂದೆ ಕುಳಿತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಮುಂದೆ ಚಲಿಸಿ ಚಾಲಕನ ಮೇಲೆ ಹರಿದಿದೆ. ಇದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕ್ಲೀನರ್ ಲಾರಿ ಕ್ಯಾಬಿನ್‍ನಲ್ಲಿ ಕುಳಿತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ವೃತ್ತ ನಿರೀಕ್ಷಕ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿ ಕೋರಾ ಠಾಣೆಯ ಎಸ್‍ಐ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin