ಪಾಕ್ ನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಯೋಧ ಹುತಾತ್ಮ

Firing--01

ಜಮ್ಮು,ಜು.22- ಜಮ್ಮುಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ರಾಜೌರಿ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಗುಂಡಿನ ದಾಳಿ ಮಾಡಿದ್ದು, ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.  ಇಲ್ಲಿನ ಸುಂದರ್ಬನಿ ಸೆಕ್ಟರ್‍ನಲ್ಲಿ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಪಾಕ್ ಭಾರತೀಯ ಸೇನೆಯತ್ತ ಅಪ್ರಚೋದಿತ ಗುಂಡಿನ ದಾಳಿ ಮಾಡಿದೆ. ಈ ವೇಳೆ ಭಾರತೀಯ ಸೇನೆ ಹಾಗೂ ಪಾಕ್ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಯೋಧ ಜಯದ್ರತ್ ಸಿಂಗ್ ಎಂಬುವರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧ ಜಯದ್ರತ್ ಸಿಂಗ್ ಉತ್ತರಪ್ರದೇಶ ಮೂಲದವರಾಗಿದ್ದು, ಪತ್ನಿಯನ್ನು ಅಗಲಿದ್ದಾರೆ. ಇನ್ನು, ಪಾಕ್‍ನ ಅಪ್ರಚೋದಿತ ದಾಳಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin