ರಾಜ್ಯಕ್ಕೆ ಪ್ರತ್ಯೇಕ ಧ್ವಜ ಏಕಿಬಾರದು : ಸಚಿವ ಖಾದರ್ ಪ್ರಶ್ನೆ

Khadar--01

ಬಾಗಲಕೋಟೆ,ಜು.22-ರಾಜ್ಯಕ್ಕೆ ಪ್ರತ್ಯೇಕ ಧ್ವಜ ಯಾಕೆ ಇರಬಾರದು? ಪ್ರತ್ಯೇಕ ಧ್ವಜದಿಂದ ದೇಶದ ಅಖಂಡತೆಗೆ ಎಲ್ಲಿ ಧಕ್ಕೆಯಾಗುತ್ತದೆ ಎಂದು ಆಹಾರ ಮತ್ತು ನಾಗರಿಕಪೂರೈಕೆ ಸಚಿವ ಯು.ಟಿ.ಖಾದರ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಒಕ್ಕೂಟ ವ್ಯವಸ್ಥೆಗೆ ಧ್ವಜ ಯಾವುದೇ ರೀತಿ ಧಕ್ಕೆಯಾಗುವುದಿಲ್ಲ. ಪ್ರತ್ಯೇಕ ನಾಡಗೀತೆಯನ್ನು ಹೊಂದಿರುವ ನಾವು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪೇನಿದೆ. ಈ ಬಗ್ಗೆ ಧ್ವಜ ವಿರೋಧಿಗಳು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ದೇಶದ ಅಖಂಡತೆ ಮತ್ತು ಶಾಂತಿಗೆ ಕಾಂಗ್ರೆಸ್ ಧಕ್ಕೆ ತಂದಿಲ್ಲ. ತರುವುದೂ ಇಲ್ಲ. ವಿರೋಧ ಪಕ್ಷಗಳು ಸುಖಾಸುಮ್ಮನೆ ಆರೋಪ ಮಾಡುತ್ತಿರುವುದು ಖಂಡನೀಯ. ನಮ್ಮ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕೆಂಬ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದೆ. ಅದರ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin