ಸಚಿವ ಜಾರ್ಜ್ ಮತ್ತು ಮೇಯರ್ ಪದ್ಮಾವತಿಯವರಿಂದ ಕನ್ನಡಿಗರಿಗೆ ಅವಮಾನ

ಈ ಸುದ್ದಿಯನ್ನು ಶೇರ್ ಮಾಡಿ

Padmavathi-01

ಬೆಂಗಳೂರು, ಜು.22-ಡಾ.ಪಾರ್ವತಮ್ಮ ರಾಜ್‍ಕುಮಾರ್ ರಸ್ತೆ ನಾಮಕರಣ ಸಮಾರಂಭಕ್ಕೆ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ಮೇಯರ್ ಪದ್ಮಾವತಿಯವರು ಬಾರದಿರುವುದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ಯಡಿಯೂರು ವಾರ್ಡ್ ವ್ಯಾಪ್ತಿಯ ಸೌತ್ ಎಂಡ್ ರಸ್ತೆಗೆ ಡಾ.ಪಾರ್ವತಮ್ಮ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಸರ್ವಾನುಮತದ ಅಂಗೀಕಾರವಾಗಿತ್ತು. ಆದರೆ ಸಚಿವ ಜಾರ್ಜ್ ಅವರು ಆದೇಶಿಸಿದ್ದಾರೆ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಹಾಜರಾಗದೆ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಎನ್.ಆರ್.ರಮೇಶ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಹಗರಣವನ್ನು ಬಯಲು ಮಾಡಿದ ನನ್ನ ಮೇಲೆ ಆಕ್ರೋಶವನ್ನು ಕಾಂಗ್ರೆಸ್ ಪಕ್ಷದವರು ಈ ರೀತಿ ತೀರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin