ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

Recruitment-Job

ಹಾಸನ, ಜು.23- ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ವು ಒಟ್ಟು 138 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳು ಮತ್ತು ವಿದ್ಯಾರ್ಹತೆ :   ಅಸಿಸ್ಟೆಂಟ್ ಇಂಜಿನಿಯರ್ (ಇನ್‍ಸ್ಟ್ರುಮೆಂಟೇಷನ್)- ಇನ್‍ಸ್ಟ್ರುಮೆಂಟೇಷನ್ ಟೆಕ್ನಾಲಜಿ ಇಂಜಿನಿಯರಿಂಗ್‍ನಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸಮಾನ ವಿದ್ಯಾರ್ಹತೆ, ಜೂನಿಯರ್ ಇಂಜಿನಿಯರ್, (ಸಿವಿಲ್) – ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಜೂನಿಯರ್ ಇಂಜಿನಿಯರ್, (ಎಲೆಕ್ಟ್ರಿಕಲ್) – ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1-40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ – 38 ವರ್ಷ, ಇತರರು 35 ವರ್ಷವಾಗಿರಬೇಕು.  ಅಭ್ಯರ್ಥಿಗಳು ನಿಗಮದ ವೆಬ್‍ಸೈಟ್  www.karnatakapower.com ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತುಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ , ಮೈಸೂರು ಇವರನ್ನು ಸಂಪರ್ಕಿಸಬಹುದಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin