ಕಾನೂನು ಚೌಕಟ್ಟಿನಲ್ಲೇ ರಾಮಮಂದಿರ ನಿರ್ಮಾಣ : ಅಮಿತ್ ಶಾ

ಈ ಸುದ್ದಿಯನ್ನು ಶೇರ್ ಮಾಡಿ

Ram-MAandir

ನವದೆಹಲಿ, ಜು.23-ಪರಸ್ಪರ ಮಾತುಕತೆ ನಂತರ ಕಾನೂನು ರೀತಿಯಲ್ಲೇ ರಾಮಮಂದಿರ ನಿರ್ಮಿಸಲು ಬಿಜೆಪಿ ಬಯಸುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.  ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಷಯದಲ್ಲಿ ಪಕ್ಷದ ನಿಲುವು ಸ್ಪಷ್ಟವಾಗಿದೆ. ಕಳೆದ ನಾಲ್ಕು ಲೋಕಸಭೆ ಚುನಾವಣೆಗಳ ಪ್ರಣಾಳಿಕೆಗಳಲ್ಲಿ ಇದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಕಾನೂನು ರೀತಿಯಲ್ಲೇ ಮಂದಿರ ನಿರ್ಮಿಸಲಾಗುವುದು. ಅದಕ್ಕೂ ಮುನ್ನ ಪರಸ್ಪರ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಮಮಂದಿರ-ಬಾಬರಿ ಮಸೀದಿ ಭೂ ವಿವಾದ ಪ್ರಕರಣವನ್ನು ಇತ್ಯರ್ಥಗೊಳಿಸಲು ಅತಿ ಶೀಘ್ರದಲ್ಲೇ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಘೋಷಿಸಿದೆ. ಸವೋಚ್ಚ ನ್ಯಾಯಾಲಯದ ಈ ಹೇಳಿಕೆಯಿಂದಾಗಿ 2019ರ ವೇಳೆಗೆ ಈ ವಿವಾದ ಇತ್ಯರ್ಥವಾಗುವ ಸೂಚನೆ ಲಭಿಸಿದೆ.  ಭೂ ವಿವಾದ ಪ್ರಕರಣದಲ್ಲಿ ಅಲಹಾಬಾದ್ ಹೈಕೋಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸದ್ಯದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ಈ ವಿಷಯ ತಿಳಿಸಿತ್ತು. ಈ ಪ್ರಕರಣದ ಬಗ್ಗೆ ಶೀಘ್ರ ವಿಚಾರಣೆ ನಡೆಸಬೇಕೆಂದು ಬಿಜೆಪಿ ಮುಖಂಡ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin