ಕೆಎಸ್‍ಆರ್‍ಟಿಸಿ ಮುಡಿಗೇರಿತು 200ನೇ ಪ್ರಶಸ್ತಿ

KSRTC01

ಬೆಂಗಳೂರು, ಜು.22- ಕೆಎಸ್‍ಆರ್‍ಟಿಸಿಯ ಉತ್ತಮ ಸೇವೆಯಿಂದ ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳು ಲಭ್ಯವಾಗುತ್ತಿದ್ದು, ಈಗ 200ನೇ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.  ಭಾರತ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಸಂಸ್ಥೆಯು ಮೈಸೂರಿನಲ್ಲಿ ಮಿತ್ರ ಮೈಸೂರು ಇಂಟಲಿಜೆಂಟ್ ಟ್ರಾನ್ಸ್‍ಪೋರ್ಟ್ ಸಿಸ್ಟಮ್ ವ್ಯವಸ್ಥೆಯನ್ನು ಅಳವಡಿಸಿದ್ದು, ಇದಕ್ಕೆ ಪ್ರತಿಷ್ಠಿ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಇನ್ಸ್‍ಟಿಟ್ಯೂಟ್ ಆಫ್ ಇಂಡಿಯಾ ಅವಾರ್ಡ್-2017 ಲಭಿಸಿದೆ.

ಸರ್ಕಾರಿ ಸೌಮ್ಯದ ಸಂಸ್ಥೆಗಳು ಹೊಸ ಹೊಸ ಯೋಜನೆಗಳನ್ನು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸು ವಲ್ಲಿ ಸಂಸ್ಥೆ ಯಶಸ್ವಿಯಾಗಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ನಗರದ ನಿಮಾನ್ಸ್ ಕನ್ವೆನ್ಷನ್ ಹಾಲ್‍ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಇನ್ಸ್‍ಟಿಟ್ಯೂಟ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಜ್‍ಕಲಾಡಿ ಅವರು ಕೆಎಸ್‍ಆರ್‍ಟಿಸಿಯ ನಿರ್ದೇಶಕ ಬಿ.ಎನ್.ಎಸ್.ರೆಡ್ಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.  ಬಸು ದತ್ತ, ಕೆ.ರಾಮಮೂರ್ತಿ, ಎಚ್. ಗುರುರಾಜ್ ಮತ್ತಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin