ಪ್ರತ್ಯೇಕ ಗೂರ್ಖಾಲ್ಯಾಂಡ್ ರಾಜ್ಯಕ್ಕೆ ಮಾವೋವಾದಿಗಳ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Darjeelin-g01ಡಾರ್ಜಿಲಿಂಗ್, ಜು. 23 -ಪಶ್ಚಿಮ ಬಂಗಾಳದ ಮನಮೋಹಕ ಧಾಮ ಗೂರ್ಖಾ ಲ್ಯಾಂಡ್ ಪ್ರತ್ಯೇಕ ರಾಜ್ಯಕ್ಕಾಗಿ ಬಹುದಿನಗಳಿಂದ ಹೋರಾಟ ನಡೆಸುತ್ತಿರುವ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಹೋರಾಟವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ನೆರೆಯ ದೇಶದ ಮಾವೋವಾದಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಪಶ್ಚಿಮಬಂಗಾಳದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಫೋಟಕ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

ತನಿಖೆ ಸಂಸ್ಥೆಯಿಂದ ಈ ಮಾಹಿತಿ ಬಂದಿದ್ದು, ಸರ್ಕಾರಿ ಹಿರಿಯ ಅಧಿಕಾರಿಗಳು ಮತ್ತು ಆಸ್ತಿಗಳು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ನಾನಾ ಕಡೆ ದಾಳಿ ನಡೆಸಲು ಜಿಜೆಎಂ ಮಾವೋವಾದಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಅಧಿಕಾರಿ ಅನೂಜ್ ಶರ್ಮಾ ತಿಳಿಸಿದ್ದಾರೆ.
ಜಿಜೆಎಂ ಸುಮಾರು 30 ಮಾವೋವಾದಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅವರಿಂದ ಅಪಾಯಕಾರಿ ಶಸ್ತ್ರಾಸ್ತ್ರ ಮದ್ದುಗುಂಡುಗಳನ್ನು ಖರೀದಿಸುತ್ತಿದ್ದಾರೆ. ಚಳವಳಿಯ ವೇಳೆ ಪೊಲೀಸರ ಮೇಲೆ ದಾಳಿ ನಡೆಸಲು ತಂತ್ರ ರೂಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಳೆದ 38 ವರ್ಷಗಳಲ್ಲಿ ಮಾವೋವಾದಿಗಳು ಗಡಿಭಾಗದ ಚೆಕ್‍ ಪೋಸ್ಟ್‍ಗಳು, ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಳಿ ನಡೆಸುವ ಮಾಹಿತಿ ಇದೆ. ಹೀಗಾಗಿ ಅವರ ಮೇಲೆ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟಕ ಮಾಹಿತಿ ಹೊರಬೀಳುತ್ತಿದ್ದಂತೆ ರಾಜ್ಯಸರ್ಕಾರ ವಿಶೇಷ ಪೊಲೀಸ್ ಅಧಿಕಾರಿಗಳನ್ನು ಅಲ್ಲಿಗೆ ಕಳುಹಿಸಿಕೊಟ್ಟಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin