ಭಾರತದಿಂದ ಸೂಪರ್ ಕಂಪ್ಯೂಟರ್ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ಬೆಂಗಳೂರು, ಜು.23- ಪ್ರಧಾನಿ ಮೋದಿ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಸಾಕಾರ ಗೊಳಿಸುವ ನಿಟ್ಟಿನಲ್ಲಿ 4500 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಕಂಪ್ಯೂಟರ್ ನಿರ್ಮಾಣಕ್ಕೆ ಮೂರು ಹಂತಗಳ ಯೋಜನೆಯನ್ನು ಅನುಷ್ಠಾನಗೊಳಿಸ ಲಾಗುತ್ತಿದೆ.  ಇಂಟರ್‍ನೆಟ್ ಸೇವೆಯನ್ನು ಅತ್ಯಂತ ಕ್ಷಿಪ್ರ ವೇಗದಲ್ಲಿ ಗ್ರಾಹಕರಿಗೆ ತಲುಪುವಂತೆ ಮಾಡಲು ಹಾಗೂ ವಿವಿಧ ಉದ್ದೇಶಗಳಿಗಾಗಿ ಬಳಸಲು ನೆರವಾಗುವಂತೆ ಸೂಪರ್ ಕಂಪ್ಯೂಟರ್‍ಗಳನ್ನು ಮೂರು ಹಂತಗಳಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಚಾಲನೆ ದೊರೆತಿದೆ.

ಇದಕ್ಕಾಗಿ ಸೂಪರ್ ಕಂಪ್ಯೂಟರ್ ಮೆಷಿನ್ ಎಂಬ ಅಭಿಯಾನವನ್ನು ಸಹ ಕಾರ್ಯಗತಗೊಳಿಸಲಾಗಿದ್ದು, ಜಗತ್ತಿನ ಶಕ್ತಿಶಾಲಿ ರಾಷ್ಟ್ರಗಳೊಂದಿಗೆ ಸಮರ್ಥ ಪೈಪೋಟಿ ನೀಡಲು ಅನುಕೂಲವಾಗುವಂತೆ ಈ ಅಗಾಧ ಸಾಮಥ್ರ್ಯದ ಯಂತ್ರಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin