ಈಜೀಪುರ ಬಳಿ ಮೇಲ್ಸೇತುವೆ ಲೋಕಾರ್ಪಣೆ

Siddaramaia--01

ಬೆಂಗಳೂರು, ಜು.24-ಕೋರಮಂಗಲದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಚಾಲನೆ ನೀಡಿದರು.  ಈಜಿಪುರ ರಸ್ತೆ ಜಂಕ್ಷನ್ ಹಾಗೂ ಸೋನಿ ವಲ್ರ್ಡ್ ಜಂಕ್ಷನ್ ಮಾರ್ಗವಾಗಿ ಕೇಂದ್ರೀಯ ಸದನ ಜಂಕ್ಷನ್‍ವರೆಗಿನ ಮೇಲ್ಸೇತುವೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಿದರು. ಬಿಟಿಎಂ ವಿಧಾನಸಭಾ ಕ್ಷೇತ್ರದ ಎಂಟು ವಾರ್ಡ್‍ಗಳಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ಚಾಲನೆ, ಕೋರಮಂಗಲ ವಾರ್ಡ್‍ನ 20ನೆ ಮುಖ್ಯರಸ್ತೆಗೆ ವೈಟ್‍ಟ್ಯಾಪಿಂಗ್ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗೆ ಏಕಕಾಲಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಈಗ ಆರಂಭವಾಗಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮೇಯರ್, ಆಯುಕ್ತ ಮಂಜುನಾಥ್‍ಪ್ರಸಾದ್ ಕಾಮಗಾರಿಗಳ ಬಗ್ಗೆ ಕಣ್ಣಿಟ್ಟಿರುವಂತೆ ಸೂಚಿಸಿದರು. ಗುತ್ತಿಗೆದಾರರು ಕಾಮಗಾರಿಗಳ ಗುಣಮಟ್ಟ ಕಾಪಾಡುವಂತೆ ಸಿಎಂ ಆದೇಶಿಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಜಿ.ಪದ್ಮಾವತಿ, ಮಾಜಿ ಮೇಯರ್ ಮಂಜುನಾಥರೆಡ್ಡಿ, ಆಯುಕ್ತ ಮಂಜುನಾಥಪ್ರಸಾದ್ ಮತ್ತಿತರರು ಹಾಜರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin