ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಆಟೋ ಚಾಲಕನ ಕೊಲೆ

Murder

ಬೆಂಗಳೂರು, ಜು.24- ಆಟೋ ಚಾಲಕನನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರವಿ (27) ಕೊಲೆಯಾದ ಆಟೋ ಚಾಲಕ. ಮಾಳಗಾಲದಲ್ಲಿರುವ ಸ್ನೇಹಿತರ ರೂಂಗೆ ನಿನ್ನೆ ಸಂಜೆ ರವಿ ಹೋಗಿದ್ದಾಗ ರಾತ್ರಿ ದುಷ್ಕರ್ಮಿಗಳು ಇವರ ತಲೆಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು , ಯಾರು, ಏತಕ್ಕಾಗಿ ಈತನನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಹಣಕಾಸು ವಿಚಾರವಾಗಿ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸುದ್ದಿ ತಿಳಿದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin