ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಡಿಜಿಟಲ್ ಟಚ್ : ಡಿ.ಕೆ.ಶಿವಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

DKS

ಬೆಂಗಳೂರು, ಜು.24- ಪ್ರವಾಸೋದ್ಯಮ ಇಲಾಖೆ ವತಿಯಿಂದ ಗೋಲ್ಡನ್ ಕಾರಿಡಾರ್ ಗುರುತಿಸಲು ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಡಿಜಿಟಲ್ ಟಚ್ ನೀಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಐದು ಎಕರೆ ಜಮೀನು ಕೇಳಲಾಗಿದೆ. ಪ್ರವಾಸಿಗರಿಗೆ ಅನುಕೂಲವಾಗುವಂತೆ ವಸ್ತು ಪ್ರದರ್ಶನ ಕೇಂದ್ರ ನಿರ್ಮಿಸಲಾಗುವುದು. ಸಂಶೋಧನೆ ಮತ್ತು ಇತಿಹಾಸಕಾರರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೆಂಪೇಗೌಡ ಅವರಿಗೆ ಸಂಬಂಧಿಸಿದ ಪ್ರಮುಖ ಸ್ಥಳಗಳನ್ನು ಗುರುತಿಸಿ ಅಲ್ಲಿ ಪ್ರತಿಮೆ ನಿರ್ಮಿಸಲಾಗುವುದು. ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿ ರೈತರಿಂದ ಐದು ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ನಗರದ ಮೇಯೋ ಹಾಲ್‍ನಲ್ಲಿ ಪ್ರಾಧಿಕಾರದ ಕಚೇರಿಯನ್ನು ತೆರೆಯಲು ತೀರ್ಮಾನಿಸಲಾಗಿದೆ. ಈ ಎಲ್ಲಾ ಯೋಜನೆಗಳನ್ನು ಮೂರು ತಿಂಗಳೊಳಗೆ ಪರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಸಚಿವರಾದ ಕಾಗೋಡು ತಿಮ್ಮಪ್ಪ, ಉಮಾಶ್ರೀ, ಪ್ರಾಧಿಕಾರದ ಸದಸ್ಯರು ಸೇರಿದಂತೆ ಮತ್ತಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin