ನಾಳೆ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ

Kovind--01

ನವದೆಹಲಿ, ಜು.24- ಹದಿನಾಲ್ಕನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ ಕೋವಿಂದ್ ಅವರು ನಾಳೆ ಸಂಸತ್ತಿನ ಸೆಂಟ್ರಲ್‍ಹಾಲ್‍ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಮಧ್ಯಾಹ್ನ 12.15ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಮಂತ್ರಿ, ಕೇಂದ್ರ ಸಚಿವರು, ಎಲ್ಲಾ ರಾಜ್ಯಗಳ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin