ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಸಿಎಂ ಭೇಟಿ ಮಾಡಲಿರುವ ಮಠಾಧೀಶರ ನಿಯೋಗ

Siddaramaiah--01

ಬೆಂಗಳೂರು, ಜು.24-ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವೆಲ್ಲ ಒಟ್ಟಾಗಿ ಬಂದರೆ ಪ್ರತ್ಯೇಕ ಧರ್ಮದ ಬಗ್ಗೆ ಮಾನ್ಯತೆ ನೀಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿಯೂ ಕೂಡ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 25ಕ್ಕೂ ಹೆಚ್ಚು ಮಠಾಧೀಶರ ನಿಯೋಗ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದೆ ಎಂದು ತಿಳಿದುಬಂದಿದೆ.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಪರ -ವಿರೋಧಗಳು ಕೇಳಿಬಂದಿವೆ. ಈ ನಡುವೆ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡಬೇಕೆಂದು ಉತ್ತರ ಕರ್ನಾಟಕದ ಪ್ರಭಾವಿ ಮಠಾಧೀಶರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಮಠಾಧೀಶರು ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಪಡೆದುಕೊಂಡಿದೆ. ವೀರಶೈವ,ಲಿಂಗಾಯತ ಇವೆರಡರಲ್ಲೂ ಗೊಂದಲ ಉಂಟಾಗಿದೆ. ನಾವು ಬೇರೆ, ನಾವು ಬೇರೆ ಎನ್ನುವ ಚರ್ಚೆಗಳು ನಡೆದಿವೆ. ವೀರಶೈವ-ಲಿಂಗಾಯತ ಎರಡೂ ಒಂದೇ. ಯಾವುದೇ ಕಾರಣಕ್ಕೂ ಬೇರೆಯಲ್ಲ ಎಂಬ ಚರ್ಚೆಗಳೂ ಕೂಡ ನಡೆದಿವೆ.
ಅಖಿಲ ಭಾರತ ವೀರಶೈವ ಮಹಾಸಭಾ ಮುಖಂಡರು, ವೀರಶೈವ ಲಿಂಗಾಯತರು ಒಂದೇ ಎಂಬ ಸಂದೇಶ ನೀಡಿದ್ದಾರೆ. ಆದರೆ ಇತ್ತೀಚೆಗೆ ಬೀದರ್‍ನಲ್ಲಿ ನಡೆದ ಲಿಂಗಾಯತರ ಸಮಾವೇಶದಲ್ಲಿ ಇವೆರಡು ಬೇರೆ ಬೇರೆ ಬಸವಣ್ಣ ಸ್ಥಾಪಿತ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಬೇಕೆಂಬ ಆಗ್ರಹ ಕೇಳಿ ಬಂದಿದೆ.

ಮುಖ್ಯಮಂತ್ರಿಗಳು ಕೂಡ ತಾವೆಲ್ಲ ಒಟ್ಟಾಗಿ ಬಂದರೆ ತಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಮುಂದಾಗಿದ್ದಾರೆ. ತಮ್ಮದು ಪ್ರತ್ಯೇಕ ಧರ್ಮ ಎಂದು ಸಾರಲು ಹಲವು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದ ಸಮುದಾಯದವರಿಗೆ ಮುಖ್ಯಮಂತ್ರಿಯವರ ಹೇಳಿಕೆಯಿಂದ ಹೊಸ ಸಂಚಲನ ಮೂಡಿದ್ದು, ಮಠಾಧೀಶರ ಮೂಲಕ ಈ ವಿಷಯವನ್ನು ಮತ್ತಷ್ಟು ಮುನ್ನೆಲೆಗೆ ತರಲು ತೀರ್ಮಾನಿಸಿದ್ದಾರೆ.  ಚುನಾವಣಾ ಹೊಸ್ತಿನಲ್ಲಿರುವ ಈ ಸಂದರ್ಭದಲ್ಲಿ ಇಂತಹ ಸೂಕ್ಷ್ಮ ವಿಷಯವನ್ನು ಆಳುವ ಪಕ್ಷ, ವಿಪಕ್ಷಗಳು ಯಾವ ರೀತಿ ನಿಭಾಯಿಸುತ್ತವೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin