ರೈಲಿಗೆ ತಲೆ ಕೊಟ್ಟು 108 ಆಂಬುಲೆನ್ಸ್ ಚಾಲಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Train-Suicide

ಚನ್ನಪಟ್ಟಣ, ಜು.24- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ 108 ಚಾಲಕ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ರೈಲ್ವೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮಂಡ್ಯ ಜಿಲ್ಲೆಯ ಸುಂಡಹಳ್ಳಿ ಗ್ರಾಮದ ನಿವಾಸಿ ಅರುಣ್‍ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ಚಾಲಕ. ಚನ್ನಪಟ್ಟಣದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಅರುಣ್‍ಕುಮಾರ್, ಮೂರ್ನಾಲ್ಕು ವರ್ಷದಿಂದ 108ವಾಹನದ ಚಾಲಕ ವೃತ್ತಿ ಮಾಡುತ್ತಿದ್ದನು. ದಂಪತಿಗೆ ಮಕ್ಕಳಾಗದಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ. ರಾತ್ರಿ ಹೊರಗೆ ಹೋಗಿ ಬರುವುದಾಗಿ ಪತ್ನಿಗೆ ಹೇಳಿದ ಈತ 10.30ರಲ್ಲಿ ಎಕ್ಸ್‍ಪ್ರೆಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ರುಂಡ-ಮುಂಡ ಬೇರ್ಪಟ್ಟಿದೆ. ಸುದ್ದಿ ತಿಳಿದ ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಪರಿಚಿತ ವ್ಯಕ್ತಿ ಸಾವು:

ರಾಮನಗರ ರೈಲ್ವೆ ನಿಲ್ದಾಣದ ಬಳಿ ಸುಮಾರು 35ರಿಂದ 40 ವರ್ಷದ ವ್ಯಕ್ತಿ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.  ಇವರ ಹೆಸರು, ವಿಳಾಸ ತಿಳಿದು ಬಂದಿಲ್ಲ. ಶವವನ್ನು ಕಂಡ ಸ್ಥಳೀಯರು ತಕ್ಷಣ ಚನ್ನಪಟ್ಟಣ ನಗರ ರೈಲ್ವೆ ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರದಲ್ಲಿ ದೇಹವನ್ನಿಡಲಾಗಿದೆ.  ವಾರಸುದಾರರು ಕೂಡಲೇ ಚನ್ನಪಟ್ಟಣ ನಗರ ರೈಲ್ವೆ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin