ಗುಜರಾತ್‍ನಲ್ಲಿ ವರುಣನ ರೌದ್ರಾವತಾರ, 30,000 ಜನರ ಸ್ಥಳಾಂತರ

Rain-Helicoptot

ದೀಸಾ, ಗುಜರಾತ್, ಜು.25-ಭಾರೀ ಮಳೆಯಿಂದ ಗುಜರಾತ್‍ನ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಅಪಾಯದಲ್ಲಿ ಸಿಲುಕಿದ್ದ ಸುಮಾರು 30,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯ ಉತ್ತರ ಮತ್ತು ಮಧ್ಯಭಾಗಗಳ ಹಲವಾರು ಜಿಲ್ಲೆಗಳು ಜಲಾವೃತವಾಗಿದ್ದು, ಲಕ್ಷಾಂತರ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. 20 ಹೆದ್ದಾರಿಗಳು ಮತ್ತು ರೈಲು ಮಾರ್ಗಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಪ್ರಮುಖ ನಗರಗಳ ನಡುವೆ ಸಂಪರ್ಕ ಕಳೆದುಕೊಂಡಿದೆ.

ಗುಜರಾತ್‍ನಲ್ಲಿ ಜುಲೈ 21ರಿಂದ ನಿರಂತರ ಮಳೆಯಿಂದ ಅನೇಕ ನದಿಗಳು ಮತ್ತು ಉಪ ನದಿಗಳು ಉಕ್ಕಿ ಹರಿಯುತ್ತಿದೆ. ಬನಸ್ಕಾಂತ ನೆರೆ ಹಾವಳಿಯಿಂದ ತೀವ್ರ ಹಾನಿಗೊಳಗಾಗಿದೆ. ಜೂನ್‍ನಿಂದ ಈವರೆಗೆ ಮಳೆ ಮತ್ತು ನೆರೆ ಹಾವಳಿಯಿಂದ 70ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಅನೇಕರು ಗಾಯಗೊಂಡಿದ್ದಾರೆ.  ರಾಷ್ಟ್ರೀಯ ವಿಪತ್ತು ಸ್ಪಂದನೆ ಪಡೆ ಮತ್ತು ಸೇನಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯುದ್ಧೋಪಾದಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಕೈಗೊಂಡಿವೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಯೋಧರು ಹೆಲಿಕಾಪ್ಟರ್ ಮತ್ತು ದೋಣಿಗಳನ್ನು ಬಳಸುತ್ತಿದ್ದಾರೆ.  ಜುಲೈ 29ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin