ಫ್ಲೈ ಓವರ್ ಮೇಲೆ ಸರ್ಕಾರಿ ಬಸ್ ಸಂಚಾರ ಖಂಡಿಸಿ ಪ್ರತಿಭಟನೆ

KSRTC--01

ನೆಲಮಂಗಲ, ಜು.25- ಇಲಾಖೆ ನಿಯಮವನ್ನು ಗಾಳಿಗೆ ತೂರಿ ಸರ್ವೀಸ್ ರಸ್ತೆ ಬಿಟ್ಟು ಫ್ಲೈ ಓವರ್ ಮೇಲೆ ಸರ್ಕಾರಿ ಬಸ್ ಸಂಚರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು, ಸ್ಥಳೀಯರು ತಾಲೂಕಿನ ಸೊಂಡೆಕೊಪ್ಪ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಪ್ರತಿಭಟನೆ ನಡೆಸಿದರು. ಸುಮಾರು 10ಕ್ಕೂ ಹೆಚ್ಚು ಬಸ್‍ಗಳನ್ನು ತಡೆದು ಸರ್ವೀಸ್ ರಸ್ತೆಯಲ್ಲೇ ಸಂಚರಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿದವು. ಇದರಿಂದ ಕೆಲಕಾಲ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿ ಸವಾರರು ಪರದಾಡುವಂತಾಯಿತು.

ಬೆಳಗ್ಗೆ ವೇಳೆ ಫ್ಲೈ ಓವರ್‍ನಲ್ಲಿ ಸರ್ಕಾರಿ, ಖಾಸಗಿ ಬಸ್‍ಗಳು, ಲಾರಿಗಳು ಸರ್ವೀಸ್ ರಸ್ತೆಯಲ್ಲಿ ಸಂಚರಿಸಬೇಕೆಂಬ ನಿಯಮವಿದೆ. ಆದರೆ, ಈ ನಿಯಮ ಗಾಳಿಗೆ ತೂರಿ ಸರ್ಕಾರಿ ಬಸ್‍ಗಳು ಓಡಾಡುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin